ಸುಕ್ಮಾ: ಛತ್ತೀಸಗಢದ ಸುಕ್ಮಾ ಜಿಲ್ಲೆಯ ಹಳ್ಳಿಯೊಂದರಲ್ಲಿ ವಾಮಾಚಾರ ಮಾಡುತ್ತಿದ್ದಾರೆ ಎಂದು ಶಂಕಿಸಿ ಐವರನ್ನು ಥಳಿಸಿ ಕೊಂದಿರುವ ಘಟನೆ ಭಾನುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆಯಲ್ಲಿ ಇಬ್ಬರು ದಂಪತಿಗಳು ಮತ್ತು ಓರ್ವ ಮಹಿಳೆಯನ್ನು ಥಳಿಸಿ ಹತ್ಯೆ ಮಾಡಿದ್ದು, ಗ್ರಾಮದ ಐವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಳೆದ ಗುರುವಾರದಂದು (ಸೆಪ್ಟೆಂಬರ್ 12) ರಾಜ್ಯದ ಬಲೋಡಾ ಬಜಾರ್–ಬಾಟಾಪಾರ ಜಿಲ್ಲೆಯ ಹಳ್ಳಿಯೊಂದರಲ್ಲಿ ವಾಮಾಚಾರ ಮಾಡುತ್ತಿದ್ದಾರೆ ಎಂದು ಶಂಕಿಸಿ ಅಪ್ರಾಪ್ತ ಬಾಲಕ ಸೇರಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ್ದರು.