ನವದೆಹಲಿ: 8 ವರ್ಷಗಳಲ್ಲಿ 16 ಕೋಟಿ ಉದ್ಯೋಗ ಸೃಷ್ಟಿ ಭರವಸೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, ಯುವಕರಿಗೆ 71,000 ನೇಮಕಾತಿ ಪತ್ರಗಳನ್ನು ವಿತರಿಸಿದ್ದು, ಉಳಿದ ಉದ್ಯೋಗ ಎಲ್ಲಿ ಸೃಷ್ಟಿಯಾಗಿದೆ ಎಂಬ ಕುರಿತು ದೇಶದ ಯುವ ಜನತೆಗೆ ವಿವರಣೆ ನೀಡಲಿ ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ನೀಡುವ ಪ್ರಧಾನಿ ಮೋದಿ ಭರವಸೆಯನ್ನು ನೆನಪಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸರ್ಕಾರಿ ಇಲಾಖೆಗಳಲ್ಲಿ 30 ಲಕ್ಷ ಹುದ್ದೆಗಳು ಇನ್ನೂ ಖಾಲಿಯಿವೆ ಎಂದರು.

‘ನರೇಂದ್ರ ಮೋದಿಯವರೇ, ಸರ್ಕಾರಿ ಇಲಾಖೆಗಳಲ್ಲಿ 30 ಲಕ್ಷ ಹುದ್ದೆಗಳು ಖಾಲಿಯಿವೆ. ಪ್ರತಿಯಾಗಿ ನೀವು ಇಂದು ವಿತರಿಸುತ್ತಿರುವ 71,000 ನೇಮಕಾತಿ ಪತ್ರಗಳು ತುಂಬಾ ಕಡಿಮೆಯಲ್ಲವೇ? ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದೀರಿ. ಕಳೆದ ಎಂಟು ವರ್ಷಗಳಲ್ಲಿ 16 ಕೋಟಿ ಉದ್ಯೋಗ ಎಲ್ಲಿ ನೀಡಿದ್ದೀರಿ ಎಂಬುದನ್ನು ದೇಶದ ಯುವಕರಿಗೆ ಸ್ವಲ್ಪ ವಿವರಿಸಿ’ ಎಂದು ಖರ್ಗೆ ಟ್ವೀಟ್ ಮೂಲಕ ವ್ಯಂಗ್ಯವಾಡಿದ್ದಾರೆ.

'ರೋಜ್‌ಗಾರ್ ಮೇಳ' ಅಭಿಯಾನದ ಭಾಗವಾಗಿ ಸರ್ಕಾರಿ ಇಲಾಖೆಗಳಲ್ಲಿ ನೇಮಕಗೊಂಡ 71,426 ಮಂದಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಿ ಮೋದಿ, ನಿರಂತರ 'ರೋಜ್‌ಗಾರ್ ಮೇಳ' ನಮ್ಮ ಸರ್ಕಾರದ ಸಾಧನೆಯಾಗಿದೆ. ನಾವು ನಿರ್ಧರಿಸಿದ್ದನ್ನು ಪೂರೈಸುತ್ತೇವೆ ಎಂಬುದನ್ನು ಈ ಮೇಳ ತೋರಿಸುತ್ತಿದೆ ಎಂದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.