ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದರೆ 30 ಲಕ್ಷ ಹುದ್ದೆಗಳ ಭರ್ತಿ: ರಾಹುಲ್ ಗಾಂಧಿ

Published 7 ಮಾರ್ಚ್ 2024, 15:28 IST
Last Updated 7 ಮಾರ್ಚ್ 2024, 15:28 IST
ಅಕ್ಷರ ಗಾತ್ರ

ಜೈಪುರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಖಾಲಿ ಇರುವ 30 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಭರವಸೆ ನೀಡಿದ್ದಾರೆ.

ರಾಜಸ್ಥಾನದ ಬಾನ್ಸ್‌ವಾಢದಲ್ಲಿ ಗುರುವಾರ ‘ಭಾರತ ಜೋಡೊ ನ್ಯಾಯ ಯಾತ್ರೆ’ಯ ವೇಳೆ ಮಾತನಾಡಿದ ಅವರು ಡಿಪ್ಲೊಮಾ-ಪದವೀಧರರಿಗೆ ಶಿಷ್ಯವೇತನ ಸಹಿತ ಅಪ್ರೆಂಟಿಸ್‌ಷಿಪ್‌ ನೀಡುವುದಾಗಿ ಘೋಷಿಸಿದರು.

ಇದೇ ವೇಳೆ ಪ್ರಶ್ನೆಪತ್ರಿಕೆಗಳ ಸೋರಿಕೆ ವಿರುದ್ಧ ಕಠಿಣ ಕಾನೂನನ್ನು ಜಾರಿಗೆ ತರುವುದಾಗಿ ರಾಹುಲ್ ಗಾಂಧಿ ಘೋಷಿಸಿದರು.

ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ ಕಾನೂನು ಖಾತರಿ, ಗಿಗ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಮತ್ತು ಸ್ಟಾರ್ಟ್‌ಅಪ್‌ಗಳಿಗೆ ₹5,000 ಕೋಟಿ ನಿಧಿ ನೀಡುವುದಾಗಿ ಪ್ರಕಟಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT