ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರದಲ್ಲಿ 3.1 ತೀವ್ರತೆಯ ಭೂಕಂಪ

Published 8 ಮೇ 2023, 14:50 IST
Last Updated 8 ಮೇ 2023, 14:50 IST
ಅಕ್ಷರ ಗಾತ್ರ

ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ಸೋಮವಾರ ಮಧ್ಯಾಹ್ನ 2.28ರ ಸುಮಾರಿಗೆ ರಿಕ್ಟರ್‌ ಮಾಪಕದಲ್ಲಿ  3.1 ತೀವ್ರತೆಯ ಭೂಕಂಪ ಸಂಭವಿಸಿದೆ. ಕಂಪನದ ಅನುಭವವಾಗುತ್ತಿದ್ದಂತೆಯೇ ಜನರು ಮನೆಗಳಿಂದ ಮತ್ತು ಉದ್ಯೋಗದ ಸ್ಥಳಗಳಿಂದ ಹೊರಬಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭೂಕಂಪದ ಕೇಂದ್ರಬಿಂದು ಉತ್ತರ ಕಾಶ್ಮೀರದ ಬಾರಾಮುಲ್ಲ ಜಿಲ್ಲೆಯಲ್ಲಿ 10 ಕಿಮೀ ಆಳದಲ್ಲಿ ಪತ್ತೆಯಾಗಿದೆ ಎಂದು ರಾಷ್ಟ್ರೀಯ ಭೂಕಂಪ ಅಧ್ಯಯನ ಕೇಂದ್ರ ತಿಳಿಸಿದೆ. 

ಭೂಕಂಪದಿಂದ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT