ಲಖನೌ: ಅನುಮತಿಯಿಲ್ಲದೆ ರಾಜಭವನದ ಬಳಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಸಮಾಜವಾದಿ ಪಕ್ಷದ 31 ಸದಸ್ಯರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಕುರಿತು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ನೀಡಿರುವ ವಿವಾದಾತ್ಮಕ ಹೇಳಿಕೆ ಖಂಡಿಸಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಸಬ್ ಇನ್ಸ್ಪೆಕ್ಟರ್ ಬಾಗೇಶ್ ಶರ್ಮಾ ಅವರು ನೀಡಿದ ದೂರಿನ ಮೇರೆಗೆ ಹಜರತ್ಗಂಜ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಗುಪ್ತಾ ಅವರ ಹೇಳಿಕೆ ಖಂಡಿಸಿ ಪಾಯಲ್ ಕಿನ್ನರ್ ಅವರ ನೇತೃತ್ವದಲ್ಲಿ ಎಸ್ಪಿ ಕಾರ್ಯಕರ್ತರು ಕೈಗೆ ಕಪ್ಪು ಪಟ್ಟಿ ಧರಿಸಿ ಜಿಪಿಒ ಪಾರ್ಕ್ನಲ್ಲಿ ಮೌನ ಪ್ರತಿಭಟನೆ ನಡೆಸಿದರು. ಎಸ್ಪಿ ನಾಯಕಿ ಜೂಹಿ ಸಿಂಗ್ (ಎಸ್ಪಿ ಮಹಿಳಾ ವಿಭಾಗದ ರಾಷ್ಟ್ರೀಯ ಅಧ್ಯಕ್ಷೆ), ಸುಮಯ್ಯಾ ರಾಣಾ ಮತ್ತು ವಂದನಾ ಚತುರ್ವೇದಿ ಹಾಗೂ ಇತರ 5–7 ಮಹಿಳಾ ಬೆಂಬಲಿಗರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಸಂಜೆ ವೇಳೆಗೆ ಎಸ್ಪಿ ಕಚೇರಿಗೆ ಹಿಂತಿರುಗುತ್ತಿದ್ದ ಕಾರ್ಯಕರ್ತರು, ಇದ್ದಕ್ಕಿದ್ದಂತೆ ರಾಜಭವನವನ್ನು ತಲುಪಿ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪೊಲೀಸರು ಗುಂಪನ್ನು ಚದುರಿಸಲು ಪ್ರಯತ್ನಿಸಿದಾಗ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಯಲ್ ಕಿನ್ನರ್, ಜೂಹಿ ಸಿಂಗ್, ಸುಮಯ್ಯಾ ರಾಣಾ, ಬಿನಾ ರಾವತ್, ಸುಮನ್ ಯಾದವ್, ವಂದನಾ ಚತುರ್ವೇದಿ ಸೇರಿದಂತೆ ಇತರ 25 ಕಾರ್ಯಕರ್ತರ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.