ಗ್ಯಾಂಗ್ಟಕ್: ಉತ್ತರ ಸಿಕ್ಕಿಂನ ಛತೆನ್ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಿಲುಕಿದ್ದ 34 ಜನರನ್ನು ಹೆಲಿಕಾಪ್ಟರ್ ಮೂಲಕ ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎರಡು MI-17 V5 ಹೆಲಿಕಾಪ್ಟರ್ಗಳು 34 ಜನರನ್ನು ಹೊತ್ತುಕೊಂಡು ಪಕ್ಯೋಂಗ್ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದು ರಕ್ಷಣಾ ಕಾರ್ಯಾಚರಣೆಯನ್ನು ಪೂರ್ಣಗೊಳಿಸಿದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭೂಕುಸಿತದದಲ್ಲಿ ಹಲವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
.ಸೇನಾ ಶಿಬಿರದ ಮೇಲೆ ಭೂಕುಸಿತ: 3 ಸೇನಾ ಸಿಬ್ಬಂದಿ ಮೃತ, 6 ಸೈನಿಕರು ನಾಪತ್ತೆ.
ಭಾನುವಾರ ಸೇನಾ ಶಿಬಿರದ ಬಳಿ ಭೂಕುಸಿತ ಸಂಭವಿಸಿದ ಮಾಹಿತಿ ಬಂದ ತಕ್ಷಣ 23 ಎನ್ಡಿಆರ್ಎಫ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದರು. ಘಟನೆಯಲ್ಲಿ ಮೂವರು ಸೇನಾ ಸಿಬ್ಬಂದಿ ಮೃತಪಟ್ಟಿದ್ದಾರೆ. ಮೃತ ಸಿಬ್ಬಂದಿಯ ಶವಗಳನ್ನು ಹೊರತೆಗೆಯಲಾಗಿದ್ದು, ಇತರ ನಾಲ್ವರು ಸೈನಿಕರನ್ನು ರಕ್ಷಿಸಲಾಗಿದೆ, ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ಮೃತಪಟ್ಟ ಯೋಧರನ್ನು ಲಖ್ವಿಂದರ್ ಸಿಂಗ್, ಮನೀಷ್ ಠಾಕೂರ್ ಮತ್ತು ಅಭಿಷೇಕ್ ಲಖಾಡ ಎಂದು ಗುರುತಿಸಲಾಗಿದೆ.
.ಈಶಾನ್ಯ ರಾಜ್ಯಗಳಲ್ಲಿ ಪ್ರವಾಹ: ನೆರವಿನ ಭರವಸೆ ನೀಡಿದ ಪ್ರಧಾನಿ ಮೋದಿ.ಮಣಿಪುರ ಪ್ರವಾಹ | 10 ಸಾವಿರ ಮನೆಗಳಿಗೆ ಹಾನಿ; 56 ಸಾವಿರ ಜನರು ಸಂಕಷ್ಟದಲ್ಲಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.