ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದೆಹಲಿ ಹಿಂಸಾಚಾರ| 38 ದೂರು, 80ಕ್ಕೂ ಹೆಚ್ಚು ಬಂಧನ

ಗಣರಾಜ್ಯೋತ್ಸವದಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಗಲಭೆ
ಫಾಲೋ ಮಾಡಿ
Comments

ನವದೆಹಲಿ: ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ಹಮ್ಮಿಕೊಂಡಿದ್ದ ಟ್ರ್ಯಾಕ್ಟರ್‌ ರ್‍ಯಾಲಿಯ ಸಂದರ್ಭದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ 38 ದೂರುಗಳನ್ನು ದಾಖಲಿಸಿದ್ದು, 84 ಮಂದಿಯನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

‘ಘಟನೆಯ ತನಿಖಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಒಂಬತ್ತು ಮಂದಿ ರೈತ ಮುಖಂಡರಿಗೆ ಮನವಿ ಮಾಡಲಾಗಿತ್ತು. ಆದರೆ ಯಾರೊಬ್ಬರೂ ಬಂದಿರಲಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಜೆಪಿ ಪ್ರಾಯೋಜಿತ: ಗಣರಾಜ್ಯೋತ್ಸವ ದಿನದಂದು ನಡೆದ ಗಲಭೆಯು ಬಿಜೆಪಿ ಪ್ರಾಯೋಜಿತವಾಗಿತ್ತು. ರೈತ ಚಳವಳಿಗೆ ಕೆಟ್ಟ ಹೆಸರು ತರುವ ಉದ್ದೇಶದಿಂದ ದೆಹಲಿ ಪೊಲೀಸರ ನೆರವಿನೊಂದಿಗೆ ಬಿಜೆಪಿಯವರು ಗಲಭೆ ನಡೆಸಿದ್ದಾರೆ ಎಂದು ಎಎಪಿ ಆರೋಪಿಸಿದೆ.

‘ರೈತರು ಪ್ರತಿಭಟನೆಯನ್ನುಆರಂಭಿಸುವುದಕ್ಕೂ ಸಾಕಷ್ಟು ಮುಂಚಿತವಾಗಿಯೇ ದೀಪ್‌ ಸಿಧುಗೆ ದೆಹಲಿ ಒಳಗೆ ಪ್ರವೇಶಿಸಲು ಅವಕಾಶ ನೀಡಲಾಗಿತ್ತು. ಬಿಜೆಪಿಯ ಸೂಚನೆಯ ಮೇರೆಗೆ ದೆಹಲಿ ಪೊಲೀಸರು ಅವರಿಗೆ ಕೆಂಪುಕೋಟೆಯೊಳಗೆ ಪ್ರವೇಶಿಸಲು ಅವಕಾಶ ನೀಡಿದ್ದರು’ ಎಂದು ಎಎಪಿ ವಕ್ತಾರ ಸೌರಬ್‌ ಭಾರದ್ವಾಜ್‌ ಮಾಧ್ಯಮಗೋಷ್ಠಿಯಲ್ಲಿ ಆರೋಪಿಸಿದ್ದಾರೆ.

ಸಿಂಘು ಗಲಭೆ ಹಿಂದೆ ಆರ್‌ಎಸ್‌ಎಸ್‌–ಬಿಜೆಪಿ (ಚಂಡಿಗಡ ವರದಿ): ‘ಸಿಂಘು ಗಡಿಯಲ್ಲಿ ಶುಕ್ರವಾರ ನಡೆದ ರೈತರ ಮೇಲೆ ಕಲ್ಲುತೂರಾಟ ಘಟನೆಯ ಹಿಂದೆ ಆರ್‌ಎಸ್‌ಎಸ್‌ ಹಾಗೂ ಬಿಜೆಪಿಯ ಕೈವಾಡವಿದೆ’ ಎಂದು ರೈತ ಮುಖಂಡ ಬಲಬೀರ್‌ಸಿಂಗ್‌ ರಾಜೆವಾಲ್‌ ಆರೋಪಿಸಿದ್ದಾರೆ.

‘ಸ್ಥಳೀಯ ಜನರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಆದರೆ, ಸ್ಥಳೀಯರು ನಮ್ಮ ಪ್ರತಿಭಟನೆಗೆ ಬೆಂಬಲ ನೀಡುತ್ತಿದ್ದಾರೆ. ಸರ್ಕಾರವು ನಮ್ಮನ್ನು ಕೆರಳಿಸುವ ಪ್ರಯತ್ನ ಮಾಡುತ್ತಿದೆ. ನಾವು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದೇವೆ. ಎಷ್ಟೇ ಪ್ರಚೋದನೆ ನೀಡಿದರೂ ಹಿಂಸೆಯ ಹಾದಿಯನ್ನು ಹಿಡಿಯುವುದಿಲ್ಲ’ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT