ಶನಿವಾರ, 9 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ನಾಲ್ಕು ತಿಂಗಳ ಹಸುಗೂಸು ಕೊಂದು ಆತ್ಮಹತ್ಯೆಗೆ ವ್ಯಕ್ತಿ ಯತ್ನ

Last Updated 26 ಫೆಬ್ರವರಿ 2023, 15:56 IST
ಅಕ್ಷರ ಗಾತ್ರ

ನವದೆಹಲಿ : ಆರ್ಥಿಕ ಸಂಕಷ್ಟದಿಂದ ಬೇಸತ್ತಿದ್ದ 38 ವರ್ಷದ ವ್ಯಕ್ತಿ ಪತ್ನಿ ಮತ್ತು ನಾಲ್ಕು ತಿಂಗಳ ಹಸುಗೂಸು ಸೇರಿದಂತೆ ಇಬ್ಬರು ಗಂಡು ಮಕ್ಕಳನ್ನು ಹತ್ಯೆ ಮಾಡಿ, ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಪಶ್ಚಿಮ ದೆಹಲಿಯ ಮೋಹನ್‌ ಗಾರ್ಡನ್ ಪ್ರದೇಶದಲ್ಲಿ ಭಾನುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯು ವಿಪಿನ್ ಗಾರ್ಡನ್‌ನಿಂದ ವರದಿಯಾಗಿದೆ. ಹತ್ಯೆ ಮಾಡಿರುವ ವ್ಯಕ್ತಿಯನ್ನು ರಾಜೇಶ್ ಎಂದು ಗುರುತಿಸಲಾಗಿದೆ. 35 ವರ್ಷದ ಪತ್ನಿ ಮತ್ತು ಇಬ್ಬರು ಮಕ್ಕಳನ್ನೂ ಹತ್ಯೆ ಮಾಡಿದ್ದಾರೆ.

ಹತ್ಯೆ ಮಾಡಿದ ನಂತರ ರಾಜೇಶ್‌ ಮಣಿಕಟ್ಟಿನ ಮೇಲೆ ತೀವ್ರವಾಗಿ ಗಾಯ ಮಾಡಿಕೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ಮುಂಜಾನೆ ರಾಜೇಶ್‌ ತನ್ನ ಆರ್ಥಿಕ ಸಂಕಷ್ಟದ ಬಗ್ಗೆ ಸ್ನೇಹಿತರಿಗೆ ಸಂದೇಶ ಕಳುಹಿಸಿದ್ದರು. ಈ ಕುರಿತು ಸ್ನೇಹಿತರು ರಾಜೇಶ್‌ ಅವರ ಸಹೋದರನಿಗೆ ಮಾಹಿತಿ ನೀಡಿದ್ದು, ಆತ ಪೊಲೀಸರಿಗೆ ಬೆಳಗ್ಗೆ 6 ಗಂಟೆಗೆ ತಿಳಿಸಿದ್ದರು ಎಂದು ದ್ವಾರಕದ ಉಪ ಪೊಲೀಸ್ ಆಯುಕ್ತ ಎಂ.ಹರ್ಷ ವರ್ಧನ್ ತಿಳಿಸಿದ್ದಾರೆ.

ಈ ಘಟನೆ ನಡೆದ ಸಂದರ್ಭದಲ್ಲಿ 75ಕ್ಕೂ ಹೆಚ್ಚು ವಯಸ್ಸಾಗಿರುವ ರಾಜೇಶ್ ಅವರ ಪೋಷಕರು ಇನ್ನೊಂದು ಕೋಣೆಯಲ್ಲಿದ್ದರು. ಮೋಹನ್ ಗಾರ್ಡನ್ ಪೊಲೀಸ್‌ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT