ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆ, ಬಿರುಗಾಳಿ | ಪಶ್ಚಿಮ ಬಂಗಾಳದಲ್ಲಿ ನಾಲ್ವರ ಸಾವು: ಪ್ರಧಾನಿ ಮೋದಿ ಸಂತಾಪ

Published 1 ಏಪ್ರಿಲ್ 2024, 2:17 IST
Last Updated 1 ಏಪ್ರಿಲ್ 2024, 2:17 IST
ಅಕ್ಷರ ಗಾತ್ರ

ಜಲಪೈಗುರಿ: ಪಶ್ಷಿಮ ಬಂಗಾಳದಲ್ಲಿ ಭಾನುವಾರ ಬಿರುಗಾಳಿಯೊಂದಿಗೆ ಮಳೆ ಸುರಿದಿದೆ. ಜಲಪೈಗುರಿ ಜಿಲ್ಲೆಯಲ್ಲಿ ಮಳೆ ಸಂಬಂಧಿತ ಅವಘಡಗಳಲ್ಲಿ ನಾಲ್ವರು ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.‌‌

ಮೃತರನ್ನು ದಿಜೇಂದ್ರ ನಾರಾಯಣ ಸರ್ಕಾರ್ (52), ಅನಿಮಾ ಬರ್ಮನ್ (45), ಜಾಗನ್ ರಾಯ್ (72) ಮತ್ತು ಸಮರ್ ರಾಯ್ (64) ಎಂದು ಗುರುತಿಸಲಾಗಿದೆ.

ಅವಘಡಗಳಲ್ಲಿ ಸಂಭವಿಸಿದ ಜೀವಹಾನಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, 'ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಸಂತ್ರಸ್ತರಿಗೆ ಸೂಕ್ತ ನೆರವು ನೀಡುವಂತೆ ಸೂಚಿಸಿದ್ದೇನೆ' ಎಂದು ಹೇಳಿದ್ದಾರೆ.

'ಚಂಡಮಾರುತದಿಂದ ಸಂತ್ರಸ್ತರಾದ ಪಶ್ಚಿಮ ಬಂಗಾಳದ ಜಲಪೈಗುರಿ-ಮೈನಗುರಿ ಪ್ರದೇಶದ ಜನರೊಂದಿಗೆ ನಾವಿದ್ದೇವೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು' ಎಂದು ಮೋದಿ ಪೋಸ್ಟ್‌ನಲ್ಲಿ ಹೇಳಿದ್ದಾರೆ. ಅಲ್ಲದೇ ಸಂತ್ರಸ್ತರಿಗೆ ಸಹಾಯ ಮಾಡುವಂತೆ ನಾನು ಬಂಗಾಳದ ಎಲ್ಲಾ ಬಿಜೆಪಿ ಕಾರ್ಯಕರ್ತರಲ್ಲಿ ಮನವಿ ಮಾಡುತ್ತೇನೆ ಎಂದು ಪ್ರಧಾನಿ ತಿಳಿಸಿದ್ದಾರೆ.

ಆಲಿಕಲ್ಲು ಮಳೆ ಹಾಗೂ ಬಿರುಗಾಳಿಗೆ ಜಲಪೈಗುರಿ ನಗರ ಹಾಗೂ ಪಕ್ಕದ ಮೈನಗುರಿ ಜಿಲ್ಲೆಯಲ್ಲಿ ಹಲವು ಮನೆಗಳು ಕುಸಿದಿವೆ. ಮರಗಳು ಹಾಗೂ ವಿದ್ಯುತ್‌ ಕಂಬಗಳು ಬುಡಮೇಲಾಗಿವೆ. ಜಲಪೈಗುರಿ ಜಿಲ್ಲೆಯ ರಾಜರ್‌ಹಾಟ್, ಬರ್ನಿಷ್‌, ಬಾಕಲಿ, ಜೋರ್‌ಪಕಡಿ, ಮಾಧಬ್‌ಡಾಂಗಾ, ಸಪ್ತಿಬಾರಿ ಪ್ರದೇಶಗಳಲ್ಲಿ ಹೆಚ್ಚು ಹಾನಿಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

‘ರಕ್ಷಣಾ ಕಾರ್ಯಕ್ಕಾಗಿ ಸಿಬ್ಬಂದಿ ನಿಯೋಜಿಸಲಾಗಿದೆ. ಮೃತರ ಕುಟುಂಬಕ್ಕೆ ಪರಿಹಾರ ನೀಡಲಾಗುವುದು’ ಎಂದು ಸಿ.ಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ರಾಜ್ಯಪಾಲ ಸಿ.ವಿ. ಆನಂದ ಬೋಸ್ ಸೋಮವಾರ ಜಲಪೈಗುರಿಗೆ ಭೇಟಿ ನೀಡಲಿದ್ದಾರೆ ಎಂದು ರಾಜಭವನದ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT