ಗುರುವಾರ, 13 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋವಾ | ರಸ್ತೆ ಬದಿಯ ಗುಡಿಸಲುಗಳಿಗೆ ಬಸ್ ಡಿಕ್ಕಿ: ನಾಲ್ವರು ಕಾರ್ಮಿಕರ ಸಾವು

Published 26 ಮೇ 2024, 4:27 IST
Last Updated 26 ಮೇ 2024, 4:27 IST
ಅಕ್ಷರ ಗಾತ್ರ

ಪಣಜಿ: ದಕ್ಷಿಣ ಗೋವಾ ಜಿಲ್ಲೆಯ ಕೈಗಾರಿಕಾ ಪ್ರದೇಶದಲ್ಲಿ ಖಾಸಗಿ ಬಸ್ಸೊಂದು ರಸ್ತೆ ಬದಿಯ ಎರಡು ಗುಡಿಸಲುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕಾರ್ಮಿಕರು ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಶನಿವಾರ ರಾತ್ರಿ 11.30ರ ಸುಮಾರಿಗೆ ವೆರ್ನಾ ಇಂಡಸ್ಟ್ರಿಯಲ್ ಎಸ್ಟೇಟ್‌ನಲ್ಲಿ ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕರು ಗುಡಿಸಲುಗಳಲ್ಲಿ ಮಲಗಿದ್ದಾಗ ಅಪಘಾತ ಸಂಭವಿಸಿದೆ. ಪ್ರಕರಣ ಸಂಬಂಧ ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬಸ್ ಚಾಲಕ ಮದ್ಯದ ಅಮಲಿನಲ್ಲಿದ್ದ. ಘಟನೆಯ ಬಗ್ಗೆ ಯಾರಿಗಾದರೂ ದೂರು ನೀಡಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಕಾರ್ಮಿಕರೊಬ್ಬರು ಆರೋಪಿಸಿದ್ದಾರೆ.

ಖಾಸಗಿ ಕಂಪನಿಯೊಂದರ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಬಸ್, ಕಾರ್ಮಿಕರು ಮಲಗಿದ್ದ ಎರಡು ಗುಡಿಸಲುಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಐವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT