ನವದೆಹಲಿ: ಅಕ್ಟೋಬರ್–ನವೆಂಬರ್ ವೇಳೆಗೆ ಇನ್ನೂ ನಾಲ್ಕು ಔಷಧ ಕಂಪನಿಗಳು ಕೋವಿಡ್ ವಿರುದ್ಧದ ಲಸಿಕೆ ಉತ್ಪಾದನೆ ಆರಂಭಿಸಲಿವೆ. ಲಸಿಕಾ ಅಭಿಯಾನಕ್ಕೆ ಮತ್ತಷ್ಟು ವೇಗ ದೊರೆಯಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ ಸಂಸತ್ನಲ್ಲಿ ತಿಳಿಸಿದ್ದಾರೆ.

ಈವರೆಗೆ ದೇಶದಲ್ಲಿ 47 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಆದಷ್ಟು ಬೇಗನೆ ದೇಶದ ಎಲ್ಲ ಜನರಿಗೂ ಲಸಿಕೆ ನೀಡುವ ನಿಟ್ಟಿನಲ್ಲಿ ಎಲ್ಲ ರೀತಿಯ ಪ್ರಯತ್ನಗಳನ್ನೂ ಸರ್ಕಾರ ಮಾಡುತ್ತಿದೆ ಎಂದು ರಾಜ್ಯಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಸಚಿವರು ಹೇಳಿದ್ದಾರೆ.

ಓದಿ:ಕೋವಿಶೀಲ್ಡ್ ಉತ್ಪಾದನೆ ತಿಂಗಳಿಗೆ 12 ಕೋಟಿಗೆ ಹೆಚ್ಚಳ: ಸಚಿವ ಮಾಂಡವೀಯ

ಖಾಸಗಿ ಆಸ್ಪತ್ರೆಗಲ್ಲಿ ಬಳಕೆಯಾಗದೇ ಉಳಿದಿರುವ ಶೇ 7ರಿಂದ 9ರಷ್ಟು ಡೋಸ್ಗಳನ್ನೂ ಸರ್ಕಾರಿ ಲಸಿಕಾ ಕೇಂದ್ರಗಳ ಮೂಲಕ ನೀಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

‘ಲಸಿಕಾ ಅಭಿಯಾನ ಸುಗಮವಾಗಿ ಸಾಗುತ್ತಿದೆ. ಮುಂದಿನ ದಿನಗಳಲ್ಲಿ ಇದಕ್ಕೆ ಮತ್ತಷ್ಟು ವೇಗ ದೊರೆಯಲಿದೆ’ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.