ರುದ್ರಪ್ರಯಾಗ: ಉತ್ತರಾಖಂಡದ ಫಾಟಾ ಗ್ರಾಮದಲ್ಲಿ ಭಾರಿ ಮಳೆಯಿಂದ ಉಂಟಾದ ಭೂಕುಸಿತದಲ್ಲಿ ನೇಪಾಳದ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಭೂಕುಸಿತದ ಅವಶೇಷಗಳಿಂದ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಕಾರ್ಮಿಕರ ಮೃತದೇಹಗಳನ್ನು ಹೊರತೆಗೆದಿದೆ ಎಂದು ಅವರು ಹೇಳಿದ್ದಾರೆ.
ತುಲ ಬಹಾದುರ್, ಪೂರ್ಣ ನೇಪಾಳಿ, ಕಿಶ್ಣ ಪರಿಹಾರ್ ಮತ್ತು ಚಿಕು ಬುರ ಮೃತರು.
‘ಗುರುವಾರ ರಾತ್ರಿ ಭಾರಿ ಮಳೆ ಸುರಿದಿದೆ. ತಡರಾತ್ರಿ 1.20ರ ವೇಳೆಗೆ ಭೂಕುಸಿತ ಸಂಭವಿಸಿದೆ. ರಕ್ಷಣಾ ತಂಡ ವಿಷಯ ತಿಳಿದೊಡನೆ ಸ್ಥಳಕ್ಕೆ ಬಂದಿತು’ ಎಂದು ರುದ್ರಪ್ರಯಾಗ ವಿಪತ್ತು ನಿರ್ವಹಣಾ ಅಧಿಕಾರಿ ನಂದನ್ ಸಿಂಗ್ ರಾಜ್ವಾರ್ ಮಾಹಿತಿ ನೀಡಿದ್ದಾರೆ.