ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Election Results: ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ- ಪ್ರಧಾನಿ ಮೋದಿ ಭಾಷಣ

ರಾಜಸ್ಥಾನ, ಛತ್ತೀಸಗಢ, ಮಧ್ಯಪ್ರದೇಶದಲ್ಲಿ ಬಿಜೆಪಿಗೆ ಜಯ. ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಅಭೂತಪೂರ್ವ ಗೆಲುವು
Published 3 ಡಿಸೆಂಬರ್ 2023, 9:14 IST
Last Updated 3 ಡಿಸೆಂಬರ್ 2023, 16:05 IST
ಅಕ್ಷರ ಗಾತ್ರ
09:2103 Dec 2023

ಪ್ರಧಾನಿ ಮೋದಿ ಅವರು ದೇಶದ ಪ್ರತಿಯೊಬ್ಬರ ಹೃದಯದಲ್ಲೂ ಇದ್ದಾರೆ ಎಂದು ಬಿಜೆಪಿ ಎಂಪಿ ಸಾದ್ವಿ ಪ್ರಗ್ಯಾ ಸಿಂಗ್ ಹೇಳಿದ್ದಾರೆ. ಚುನಾವಣಾ ಫಲಿತಾಂಶದ ಕುರಿತು ಅವರು ಹೇಳಿಕೆ ನೀಡಿದ್ದಾರೆ,

ಲೋಕಸಭೆ ಚುನಾವಣೆ ವೇಳೆ ಇಂಡಿಯಾ ಮೈತ್ರಿಕೂಟ ಕುಸಿದು ಬೀಳಲಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ತೆಲಂಗಾಣದಲ್ಲಿ ಗೆದ್ದಿರುವ ಕಾಂಗ್ರೆಸ್ ಜೈ ಸೋನಿಯಾ ಅಮ್ಮ ಎಂದು ಘೋಷಣೆ ಕೂಗಿದೆ

09:4003 Dec 2023

ಜನ ಈ ಚುನಾವಣೆಯಲ್ಲಿ ಕಾಂಗ್ರೆಸ್‌ನ ಭೋಗಸ್ ಭರವಸೆಗಳನ್ನು ತಿರಸ್ಕರಿಸಿ ಪಾಠ ಕಲಿಸಿದ್ದಾರೆ ಎಂದು ಕೇಂದ್ರ ಸಚಿವರ ಪ್ರಲ್ಹಾದ ಜೋಶಿ ಹೇಳಿದ್ದಾರೆ.

09:5203 Dec 2023

ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಪ್ರಧಾನಿ ಮೋದಿ ಅವರು ಇಂದು ಸಂಜೆ ಭಾಷಣ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

09:5703 Dec 2023

ಸದ್ಯದ ಮಾಹಿತಿ ಪ್ರಕಾರ ತೆಲಂಗಾಣದಲ್ಲಿ ಕಾಂಗ್ರೆಸ್ 68 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡು ಅಧಿಕಾರದತ್ತ ದಾಪುಗಾಲು ಹಾಕುತ್ತಿದೆ. ಬಿಆರ್‌ಎಸ್‌ಗೆ ತೀವ್ರ ಮುಖಭಂಗವಾಗಿದ್ದು ಕೇವಲ 36 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

10:1903 Dec 2023

ರಾಜಸ್ಥಾನದಲ್ಲಿ ಸಿಎಂ ಅಭ್ಯರ್ಥಿ ಎಂದು ಬಿಂಬಿತವಾಗಿರುವ ವಸುಂಧರಾ ರಾಜೆ ಅವರು  ಗೆಲುವು ಸಾಧಿಸಿದ್ದಾರೆ. ರಾಜಸ್ಥಾನದಲ್ಲಿ ಬಿಜೆಪಿ 113 ಸ್ಥಾನಗಳಲ್ಲಿ ಮುನ್ನಡೆ ಇದೆ.

10:1903 Dec 2023

‘ದೇಶದ ಜನ ಯಾರ ಪರ ಎಂಬುದಕ್ಕೆ ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಸಾಕ್ಷಿ’ ಎಂದು ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ. ನಾಲ್ಕು ರಾಜ್ಯಗಳ ಪೈಕಿ ಮೂರು ಕಡೆಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವ, ಭ್ರಷ್ಟಾಚಾರರಹಿತ ಆಡಳಿತ, ಅಭಿವೃದ್ಧಿ ಕೆಲಸಗಳು ಪ್ರಮುಖ ಕಾರಣ. ದೇಶದ ಸುರಕ್ಷತೆ ಗಮನದಲ್ಲಿ ಇಟ್ಟುಕೊಂಡು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳು ಮತ್ತೊಮ್ಮೆ ಬಿಜೆಪಿಯನ್ನು ಬೆಂಬಲಿಸಿದ್ದಾರೆ ಎಂದು ಭಾನುವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

10:1903 Dec 2023

ತೆಲಂಗಾಣದ ಸಿಎಂ ಅಭ್ಯರ್ಥಿ ಎಂದು ಬಿಂಬಿತವಾಗಿರುವ ರೇವಂತ್ ರೆಡ್ಡಿ ಅವರ ಮನೆ ಮುಂದೆ ಪೊಲೀಸ್ ಭದ್ರತೆ

10:2003 Dec 2023

ಜನ ಈ ಚುನಾವಣೆಯಲ್ಲಿ ಕಾಂಗ್ರೆಸ್‌ನ ಭೋಗಸ್ ಭರವಸೆಗಳನ್ನು ತಿರಸ್ಕರಿಸಿ ಪಾಠ ಕಲಿಸಿದ್ದಾರೆ ಎಂದು ಕೇಂದ್ರ ಸಚಿವರ ಪ್ರಲ್ಹಾದ ಜೋಶಿ ಹೇಳಿದ್ದಾರೆ.

10:3403 Dec 2023

ತೆಲಂಗಾಣ ಚುನಾವಣಾ ಫಲಿತಾಂಶದ ಕುರಿತು ಕೆ.ಟಿ. ರಾಮಾರಾವ್ ಪ್ರತಿಕ್ರಿಯೆ ನೀಡಿದ್ದು, ‘ತೆಲಂಗಾಣದಲ್ಲಿ ಸತತ ಎರಡು ಬಾರಿ ಸರ್ಕಾರ ನಡೆಸಲು ಬಿಆರ್‌ಎಸ್‌ಗೆ ಅಧಿಕಾರ ನೀಡಿದ್ದಕ್ಕಾಗಿ ರಾಜ್ಯದ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇನೆ. ಇಂದು ಪ್ರಕಟಗೊಂಡ ಫಲಿತಾಂಶದ ಬಗ್ಗೆ ಬೇಸರವಾಗಿಲ್ಲ. ಆದರೆ, ಮುಂದಿನ ದಿನಗಳಲ್ಲಿ ಎಚ್ಚರಿಕೆ ಹೆಜ್ಜೆ ಇಡುವ ಮೂಲಕ ರಾಜ್ಯದಲ್ಲಿ ಮತ್ತೆ ಪುಟಿದೇಳುತ್ತೇವೆ. ಜನಾದೇಶ ಪಡೆದ ಕಾಂಗ್ರೆಸ್‌ಗೆ ಅಭಿನಂದನೆ ಸಲ್ಲಿಸುತ್ತೇನೆ’ ಎಂದು ತಿಳಿಸಿದ್ದಾರೆ.