ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿ ಮೇಲೆ ಅತ್ಯಾಚಾರ: ಪ್ರತಿಭಟನೆ

Published 24 ಮಾರ್ಚ್ 2024, 15:50 IST
Last Updated 24 ಮಾರ್ಚ್ 2024, 15:50 IST
ಅಕ್ಷರ ಗಾತ್ರ

ನವದೆಹಲಿ: ಮನೆಪಾಠದ ಶಿಕ್ಷಕರೊಬ್ಬರ ಸಹೋದರ ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಘಟನೆ ದೆಹಲಿಯ ಪಾಂಡವ ನಗರದಲ್ಲಿ ಶನಿವಾರ ರಾತ್ರಿ ನಡೆದಿದೆ. 

‘ಈ ಘಟನೆ ಬಗ್ಗೆ ಮಂಡಾವಲಿ ಪೊಲೀಸ್‌ ಠಾಣೆಗೆ ಮಾಹಿತಿ ಬಂದಿದೆ. ಎಫ್‌ಐಆರ್‌ ದಾಖಲಿಸಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಆತನ ಕುಟುಂಬದ ಕೆಲವರನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಡಿಸಿಪಿ ಅಪೂರ್ವ ಗುಪ್ತ ತಿಳಿಸಿದ್ದಾರೆ. 

‘ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂಬ ಸಂದೇಶಗಳು ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡುತ್ತಿದ್ದು, ಅತ್ಯಾಚಾರವನ್ನು ಖಂಡಿಸಿ ಈ ಪ್ರದೇಶದ ಜನರು ಪ್ರತಿಭಟನೆ ನಡೆಸಿದರು’ ಎಂದು ಮಾಹಿತಿ ನೀಡಿದ್ದಾರೆ.‌

‘ಲಾಲ್‌ ಬಹದ್ದೂರ್‌ ಶಾಸ್ತ್ರಿ ಆಸ್ಪತ್ರೆಗೆ ಹೋಲಿಸಿದರೆ, ದೆಹಲಿ ಏಮ್ಸ್‌ನ ಒನ್‌ಸ್ಟಾಪ್‌ ಸೆಂಟರ್‌ನಲ್ಲಿ ಸೌಲಭ್ಯಗಳು ಉತ್ತಮವಾಗಿವೆ. ಆದ್ದರಿಂದ ಬಾಲಕಿಯನ್ನು ಏಮ್ಸ್‌ಗೆ ಕಳುಹಿಸಲಾಗಿದೆ. ಆಕೆಯು ಆರೋಗ್ಯವಾಗಿದ್ದಾಳೆ’ ಎಂದೂ ಅವರು ಹೇಳಿದ್ದಾರೆ.

‘ಶಿಕ್ಷಕರು ಬೇರೆಡೆ ಇದ್ದಾಗ ಅವರ ಸಹೋದರ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಾನೆ. ಈ ವಿಷಯವನ್ನು ಯಾರ ಬಳಿಯಾದರೂ ಹೇಳಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಆರೋಪಿ ಸಂತ್ರಸ್ತೆಯನ್ನು ಹೆದರಿಸಿದ್ದಾನೆ. ಬಾಲಕಿ ಮನೆಗೆ ತೆರಳಿದ ಬಳಿಕ ಪೋಷಕರ ಮುಂದೆ ನಡೆದ ಸಂಗತಿಯನ್ನು ಹೇಳಿದ್ದಾಳೆ’ ಎಂದು ಮೂಲಗಳು ತಿಳಿಸಿವೆ.

ಪ್ರತಿಭಟನೆ: ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ವದಂತಿಗಳು ಹರಿದಾಡಿದ ಬೆನ್ನಲ್ಲೇ ಶಿಕ್ಷಕರ ಮನೆ ಮುಂದೆ ಸೇರಿದ ಜನರು ಪ್ರತಿಭಟಿಸಿ, ಕೆಲವು ವಾಹನಗಳನ್ನು ಧ್ವಂಸಗೊಳಿಸಿದರು.

ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಘಟನೆ ನಡೆದ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್‌ ಸಿಬ್ಬಂದಿ ಹಾಗೂ ಅರೆ ಸೇನಾಪಡೆಯನ್ನು ನಿಯೋಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT