ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌: ಬಸ್ ಪಲ್ಟಿಯಾಗಿ 40 ಮಂದಿಗೆ ಗಾಯ

‌‌‌‌‌‌ಗುಜರಾತ್‌ನ ಲಖ್ತರ್ ತಾಲ್ಲೂಕಿನಲ್ಲಿ ಬಸ್ ಪಲ್ಟಿಯಾಗಿ ಹಲವರು ಗಾಯಗೊಂಡಿದ್ದಾರೆ.
Published 16 ಅಕ್ಟೋಬರ್ 2023, 8:02 IST
Last Updated 16 ಅಕ್ಟೋಬರ್ 2023, 8:02 IST
ಅಕ್ಷರ ಗಾತ್ರ

ಸುರೇಂದ್ರನಗರ (ಗುಜರಾತ್): ಲಖ್ತರ್ ತಾಲ್ಲೂಕಿನ ವಾನಾ ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 40 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾನುವಾರ(ಅ.15) ರಾತ್ರಿ ದಿಯೋದರ್‌ನಿಂದ ಜುನಾಗಢಕ್ಕೆ ತೆರಳುತ್ತಿದ್ದ ಬಸ್ ಪಲ್ಟಿಯಾಗಿ ಅವಘಡ ಸಂಭವಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಬಿಜೆಪಿ ಶಾಸಕ ಜಗದೀಶ್ ಮಕ್ವಾನಾ, ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಬಳಿಕ ಮಾತನಾಡಿದ ಅವರು, ತಡರಾತ್ರಿ 12.15ರ ಸುಮಾರಿಗೆ ದಿಯೋದರ್‌ನಿಂದ ಜುನಾಗಢಕ್ಕೆ ಹೋಗುತ್ತಿದ್ದ ಬಸ್ ವಾನಾ ಗ್ರಾಮದ ಬಳಿ ಪಲ್ಟಿಯಾಗಿದೆ. ಬಸ್‌ನಲ್ಲಿ ಸುಮಾರು 55 ರಿಂದ 60 ಮಂದಿ ಪ್ರಯಾಣಿಕರಿದ್ದರು. ಈ ಪೈಕಿ 40 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT