ಅಗರ್ತಲಾ: ತ್ರಿಪುರಾದಲ್ಲಿ ಸುಮಾರು 400 ಉಗ್ರರು ಮುಖ್ಯಮಂತ್ರಿ ಮಾಣಿಕ್ ಸಹಾ ಅವರ ಸಮ್ಮುಖದಲ್ಲಿ ಇಂದು (ಮಂಗಳವಾರ) ಶಸ್ತ್ರಾಸ್ತ್ರಗಳನ್ನು ತ್ಯಜಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಉಗ್ರಗಾಮಿಗಳು ನ್ಯಾಷನಲ್ ಲಿಬರೇಶನ್ ಫ್ರಂಟ್ ಆಫ್ ತ್ರಿಪುರ (ಎನ್‌ಎಲ್‌ಎಫ್‌ಟಿ) ಮತ್ತು ಆಲ್ ತ್ರಿಪುರಾ ಟೈಗರ್ ಫೋರ್ಸ್‌ಗೆ (ಎಟಿಟಿಎಫ್) ಸೇರಿದವರು.
ಸೆಪ್ಟೆಂಬರ್ 4ರಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಉಗ್ರರು ಶರಣಾಗುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.