ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 17,296 ಮಂದಿಗೆ ಕೋವಿಡ್–19 ಸೋಂಕು ಇರುವುದು ದೃಢಪಟ್ಟಿದೆ. ಇದು ಈವರೆಗೆ ಒಂದು ದಿನದಲ್ಲಿ ದಾಖಲಾದ ಅತಿಹೆಚ್ಚು ಪ್ರಕರಣಗಳಾಗಿವೆಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸೋಂಕಿನಿಂದಾಗಿ ಮೃತಪಡುತ್ತಿರುವರ ಸಂಖ್ಯೆಯೂ ಗಣನೀಯವಾಗಿ ಏರಿಕೆಯಾಗುತ್ತಿದ್ದು,ಒಂದೇ ದಿನ 407 ಜನರು ಮೃತಪಟ್ಟಿದ್ದಾರೆ.

ಸದ್ಯ ದೇಶದಲ್ಲಿಒಟ್ಟು 4,90,401 ಜನರಿಗೆ ಸೋಂಕು ತಗುಲಿದೆ. ಇದರಲ್ಲಿ 2,83,637 ಸೋಂಕಿತರುಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ15,301 ಮಂದಿ ಮೃತಪಟ್ಟಿದ್ದು,1,89,463 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಅತಿಹೆಚ್ಚು ಪ್ರಕರಣಗಳು ವರದಿಯಾಗಿರುವ ಮಹಾರಾಷ್ಟ್ರದಲ್ಲಿ ಈವರೆಗೆ ಒಟ್ಟು1,47,741 ಪ್ರಕರಣಗಳು ವರದಿಯಾಗಿವೆ. ಇದರಲ್ಲಿ77,453 ಸೋಂಕಿತರು ಗುಣಮುಖರಾಗಿದ್ದಾರೆ.6,931 ಮಂದಿ ಮೃತಪಟ್ಟಿದ್ದು,63,357 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ದೆಹಲಿಯಲ್ಲಿ ಒಟ್ಟಾರೆ 73,780 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 26,586 ಸಕ್ರಿಯ ಪ್ರಕರಣಗಳಿದ್ದು, 44,765 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ2,429 ಮಂದಿ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.