ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸಂಪುಟ | 33 ಸಚಿವರ ವಿರುದ್ಧ ಕ್ರಿಮಿನಲ್‌ ಪ್ರಕರಣ: ಎಡಿಆರ್‌ ವರದಿ

Last Updated 9 ಜುಲೈ 2021, 22:35 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸಂಪುಟದ 78 ಸಚಿವರ ಪೈಕಿ 33 ಜನ ಸಚಿವರು (ಶೇ 42) ತಮ್ಮ ವಿರುದ್ಧ ಕ್ರಿಮಿನಲ್‌ ಪ್ರಕರಣಗಳಿರುವುದಾಗಿ ಘೋಷಿಸಿದ್ದಾರೆ. ಇವರ ಪೈಕಿ ನಾಲ್ವರ ವಿರುದ್ಧ ಕೊಲೆ ಯತ್ನ ಆರೋಪಕ್ಕೆ ಸಂಬಂಧಿಸಿದ ಪ್ರಕರಣಗಳಿವೆ ಎಂದು ಮತದಾನ ಹಕ್ಕುಗಳ ಗುಂಪು ಎಡಿಆರ್‌ನ ವರದಿ ಹೇಳಿದೆ.

ಬುಧವಾರ ಪುನರ್‌ರಚನೆಗೊಂಡ ಸಂಪುಟದಲ್ಲಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದವರು ಚುನಾವಣೆ ಸಂದರ್ಭದಲ್ಲಿ ಸಲ್ಲಿಸಿದ್ದ ಅಫಿಡವಿಟ್‌ಗಳಲ್ಲಿನ ವಿವರಗಳನ್ನು ಆಧರಿಸಿ ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌ (ಎಡಿಆರ್‌) ಈ ವರದಿಯನ್ನು ಸಿದ್ಧಪಡಿಸಿದೆ.

ಸಂಪುಟದಲ್ಲಿನ ಅತಿ ಕಿರಿಯ ಸಚಿವ ಎನಿಸಿಕೊಂಡಿರುವ ನಿಸಿತ್‌ ಪ್ರಾಮಾಣಿಕ್‌ ತಮ್ಮ ವಿರುದ್ಧ ಕೊಲೆ ಯತ್ನ ಆರೋಪಕ್ಕೆ ಸಂಬಂಧಿಸಿ ಪ್ರಕರಣ ದಾಖಲಾಗಿರುವುದಾಗಿ ಘೋಷಿಸಿದ್ದಾರೆ. ಅವರು ಪಶ್ಚಿಮ ಬಂಗಾಳದ ಕೂಚ್‌ಬಿಹಾರ್‌ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

ಸಚಿವರಾದ ಜಾನ್‌ ಬರ್ಲಾ, ಪಂಕಜ್‌ ಚೌಧರಿ ಹಾಗೂ ವಿ.ಮುರಳೀಧರನ್‌ ಅವರು ಸಹ ತಮ್ಮ ವಿರುದ್ಧ ಕೊಲೆ ಯತ್ನ ಆರೋಪಕ್ಕೆ ಸಂಬಂಧಿಸಿ ಪ್ರಕರಣ ದಾಖಲಾಗಿವೆ ಎಂದು ಘೋಷಿಸಿಕೊಂಡಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.

70 ಸಚಿವರು (ಶೇ 90) ಕೋಟ್ಯಾಧೀಶರಾಗಿದ್ದಾರೆ. ಅವರ ಸರಾಸರಿ ಆಸ್ತಿ ಮೌಲ್ಯ ₹ 16.24 ಕೋಟಿ ಎಂದು ವಿವರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT