ಮುಂಬೈ: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ಸಂಬಂಧ 42 ವರ್ಷದ ವ್ಯಕ್ತಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತಾರಾಪುರ ನಿವಾಸಿ ರಾಮ ಗಣಪತ್ ಭೋಯಿರ್ ಎಂಬಾತ ಈ ಕೃತ್ಯ ಎಸಗಿದ್ದಾನೆ ಎಂದು ಅವರು ತಿಳಿಸಿದ್ದಾರೆ.
ಬಾಲಕಿ ಒಬ್ಬಳೇ ಇದ್ದಾಗ ಭೋಯಿರ್ ಮನೆಗೆ ನುಗ್ಗಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಳಿಕ ಪರಾರಿಯಾಗಿದ್ದಾನೆ ಎಂದು ಹೇಳಿದ್ದಾರೆ.
ಲೈಂಗಿಕ ದೌರ್ಜನ್ಯದ ಕುರಿತು ಬಾಲಕಿ ಮಾಹಿತಿ ನೀಡಿದ ಬಳಿಕ ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭೋಯಿರ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸಕ್ಷೆನ್ 64 (ಅತ್ಯಾಚಾರ) ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.