ನವದೆಹಲಿ: ಚುನಾವಣಾ ಪ್ರಕ್ರಿಯೆಯಲ್ಲಿ ಬಳಸಲಾಗಿದ್ದ ಎಲೆಕ್ಟ್ರಾನಿಕ್ ಮತ ಯಂತ್ರಗಳು (ಇವಿಎಂ) ಮತ್ತು ವಿವಿಪ್ಯಾಟ್ಗಳ ಪರಿಶೀಲನೆ ನಡೆಸಲಾಗಿದ್ದು, ಅವುಗಳ ಮೂಲಕ ಎಣಿಸಿದ ಮತಗಳಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ. ಅವುಗಳು ವಿಶ್ವಾಸಾರ್ಹವಾಗಿವೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ದೆಹಲಿ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದರು. ಫ್ರೆಬುವರಿ 5ರಂದು ಮತದಾನ ನಡೆಯಲಿದೆ. ಫೆ.8ಕ್ಕೆ ಮತ ಎಣಿಕೆ ನಡೆಯಲಿದೆ ಎಂದು ತಿಳಿಸಿದ್ದಾರೆ.

‘2019ರಲ್ಲಿ, ಪ್ರತಿ ವಿಧಾನಸಭಾ ಕ್ಷೇತ್ರದಿಂದ ಐದು ವಿವಿಪ್ಯಾಟ್ಗಳನ್ನು ಎಣಿಕೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದ ಬಳಿಕ, ಸುಮಾರು 67,000ಕ್ಕೂ ಹೆಚ್ಚು ವಿವಿಪ್ಯಾಟ್ಗಳನ್ನು ಪರಿಶೀಲಿಸಲಾಗಿದೆ’ ಎಂದು ರಾಜೀವ್ ಕುಮಾರ್ ಹೇಳಿದ್ದಾರೆ.

‘ಈವರೆಗೆ 4.5 ಕೋಟಿಗೂ ಹೆಚ್ಚು ವಿವಿಪ್ಯಾಟ್ ಸ್ಲಿಪ್ಗಳನ್ನು ಪರಿಶೀಲಿಸಲಾಗಿದ್ದು, ಇವಿಎಂಗಳ ಮತ ಎಣಿಕೆಗೆ ಅವು ಸಂಪೂರ್ಣ ತಾಳೆಯಾಗಿವೆ. 2019ರಿಂದ ಹೊಸ ಇವಿಎಂಗಳ ಮೂಲಕ ನಡೆಸಲಾದ ಚುನಾವಣೆಯಲ್ಲಿ ಒಂದೇ ಒಂದು ಮತದ ವ್ಯತ್ಯಾಸವೂ ಕಂಡುಬಂದಿಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ’ ಎಂದು ಕುಮಾರ್ ಹೇಳಿದ್ದಾರೆ.

ಮತದಾರರ ಪಟ್ಟಿಯಿಂದ ಹಿಡಿದು ಯಂತ್ರ ನಿರ್ವಹಣೆಯವರೆಗೆ ಚುನಾವಣಾ ಪ್ರಕ್ರಿಯೆಯ ಪ್ರತಿಯೊಂದು ಅಂಶಗಳ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗುತ್ತದೆ ಮತ್ತು ರಾಜಕೀಯ ಪಕ್ಷಗಳೊಂದಿಗೆ ಹಂಚಿಕೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಚುನಾವಣಾ ಆಯೋಗ ನಡೆಸುವ ಚುನಾವಣೆ ಪ್ರಕ್ರಿಯೆಗಳು ಪಾರದರ್ಶಕವಾಗಿದೆ ಎಂದು ಕುಮಾರ್ ಪುನರುಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.