ಮುಂಬೈ(ಪಿಟಿಐ): ಬಾಲಿವುಡ್ ನಟ ಶಾರುಖ್ ಖಾನ್ ಅವರು ಭಾನುವಾರ 49ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಮನೆ ಮುಂದೆ ನೆರೆದಿದ್ದ ಅಪಾರ ಪ್ರಮಾಣದ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.
‘ಮನ್ನತ್ ಹೊರಗಡೆ ಪ್ರೀತಿಯಿಂದ ನನ್ನ ಹುಟ್ಟುಹಬ್ಬವನ್ನು ಆಚರಿಸುತ್ತಿರುವ ಎಲ್ಲರಿಗೂ ಧನ್ಯವಾದಗಳು. ಎಲ್ಲರಿಗೂ ಅಭಾರಿಯಾಗಿದ್ದೇನೆ’ ಎಂದು ಟ್ವೀಟ್ ಮಾಡಿದ್ದಾರೆ. ಬಾಲಿವುಡ್ನ ಅನೇಕರು ಶಾರುಖ್ ಖಾನ್ಗೆ ಶುಭಾಶಯ ತಿಳಿಸಿದ್ದಾರೆ.