ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೇರಳ | ನ್ಯಾಯಾಧೀಶೆಗೆ ಬೆದರಿಕೆ: ನಾಲ್ವರ ಬಂಧನ

Published 1 ಫೆಬ್ರುವರಿ 2024, 23:30 IST
Last Updated 1 ಫೆಬ್ರುವರಿ 2024, 23:30 IST
ಅಕ್ಷರ ಗಾತ್ರ

ಅಲಪ್ಪುಳ(ಕೇರಳ): ಬಿಜೆಪಿಯ ಒಬಿಸಿ ವಿಭಾಗದ ನಾಯಕ ರಂಜಿತ್ ಶ್ರೀನಿವಾಸನ್‌ ಕೊಲೆ ಪ್ರಕರಣದಲ್ಲಿ ತೀರ್ಪು ಪ್ರಕಟಿಸಿದ ನಂತರ, ಮಾವೆಲಿಕ್ಕರ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶೆಗೆ ವಿವಿಧ ಸಾಮಾಜಿಕ ವೇದಿಕೆಗಳಲ್ಲಿ ಬೆದರಿಕೆ ಒಡ್ಡಿದ ಆರೋಪದಡಿ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಇದರ ಬೆನ್ನಲ್ಲೇ, ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶೆ ವಿ.ಜಿ.ಶ್ರೀದೇವಿ ಅವರಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ನಸೀರ್‌ಮಾನ್‌(47), ರಫಿ(38), ನವಾಸ್‌ ನೈನಾ(42) ಹಾಗೂ ಶಾಜಹಾನ್(36) ಬಂಧಿತರು.

ಬೆದರಿಕೆ ಒಡ್ಡಿರುವುದಕ್ಕೆ ಸಂಬಂಧಿಸಿ ಒಟ್ಟು ಐದು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT