ಅನ್ನಮಯ್ಯ(ಆಂಧ್ರಪ್ರದೇಶ): ಜೀಪ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ 5 ಮಂದಿ ಮೃತಪಟ್ಟು, 15ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ.
ಮೃತರಲ್ಲಿ ಇಬ್ಬರು ಪುರುಷರು ಮತ್ತು ಮೂವರು ಮಹಿಳೆಯರು ಇದ್ದಾರೆ. ಗಾಯಗೊಂಡಿರುವವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
'ಅಪಘಾತದಲ್ಲಿ ಒಟ್ಟು ಐದು ಜನರು ಸಾವಿಗೀಡಾಗಿದ್ದು, ಗಾಯಾಳುಗಳ ಪೈಕಿ ಏಳು ಮಂದಿಯ ಸ್ಥಿತಿ ಗಂಭೀರವಾಗಿದೆ. ಅವರನ್ನು ತಿರುಪತಿ ರೂವಾ ಆಸ್ಪತ್ರೆಗೆ ದಾಖಲಿಸಲಾಗಿದೆ’ಎಂದು ಮೆಥಂಪಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ನಾಗಬಾಬು ಎಎನ್‌ಐಗೆ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.