ಮುಂಬೈ: ಮಹಾ ಕುಂಭಮೇಳದ ವೈರಲ್ ಬೆಡಗಿ ಮೊನಾಲಿಸಾ ಭೋಂಸ್ಲೆ ಅವರ ಬಗ್ಗೆ ಮಾನಹಾನಿ ಮಾಡಲಾಗುತ್ತಿದೆ ಎಂದು ಆರೋಪಿಸಿ ‘ದಿ ಡೈರಿ ಆಫ್ ಮಣಿಪುರ’ ಚಿತ್ರದ ನಿರ್ದೇಶಕ ಸನೋಜ್ ಮಿಶ್ರಾ ನೀಡಿದ ದೂರು ಆಧರಿಸಿ ಯೂಟ್ಯೂಬ್ ಚಾನಲ್ ಮಾಲೀಕ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸನೋಜ್ ಮಿಶ್ರಾ ನೀಡಿದ ದೂರು ಆಧರಿಸಿ ಮುಂಬೈನ ಉಪನಗರದಲ್ಲಿರುವ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಮಾಲೆ ಮಾರಾಟ ಮಾಡುತ್ತಿದ್ದ ವೇಳೆ ಮೊನಾಲಿಸಾ ಭೋಂಸ್ಲೆ ಅವರು ಗಮನ ಸೆಳೆದಿದ್ದರು. ಅವರ ಫೋಟೊ ಮತ್ತು ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದವು. ಬಳಿಕ ಮೊನಾಲಿಸಾ ಭೋಂಸ್ಲೆ ಅವರೊಂದಿಗೆ ‘ಡೈರಿ ಆಫ್ ಮಣಿಪುರ’ ಸಿನಿಮಾ ನಿರ್ಮಿಸುವುದಾಗಿ ಮಿಶ್ರಾ ಘೋಷಿಸಿದ್ದರು.

‘ಮಿಶ್ರಾ ನಿರ್ದೇಶಿಸಿದ ಯಾವುದೇ ಸಿನಿಮಾಗಳು ಇಲ್ಲಿಯವರೆಗೆ ಬಿಡುಗಡೆಯಾಗಿಲ್ಲ. ಹಾಗಾಗಿ ಮಿಶ್ರಾ ಅವರು 16 ವರ್ಷದ ಮೊನಾಲಿಸಾ ಭೋಂಸ್ಲೆ ಅವರ ವೃತ್ತಿಜೀವನವನ್ನು ಹಾಳು ಮಾಡಲು ಮುಂದಾಗಿದ್ದಾರೆ ಎಂದು ದೂರಿನಲ್ಲಿ ಹೆಸರಿಸಲಾದ ಐವರು ಆರೋಪಿಸಿದ್ದಾರೆ’ ಎಂದು ಅಂಬೋಲಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಯೂಟ್ಯೂಬ್ ಚಾನಲ್ ಮಾಲೀಕ ಸೇರಿದಂತೆ ಐವರು ಉದ್ದೇಶಪೂರ್ವಕವಾಗಿ ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದು, ನನಗೆ ಘನತೆಗೆ ಕಳಂಕ ತರಲು ಪ್ರಯತ್ನಿಸುತ್ತಿದ್ದಾರೆ’ ಎಂದು ಮಿಶ್ರಾ ಹೇಳಿದ್ದಾರೆ.

ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ಸಂಬಂಧಿತ ಸೆಕ್ಷನ್ಗಳಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.