ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ: ಬಾಲಕಿ ಮೇಲೆ ಐವರಿಂದ ಸಾಮೂಹಿಕ ಅತ್ಯಾಚಾರ

Published 21 ಡಿಸೆಂಬರ್ 2023, 6:28 IST
Last Updated 21 ಡಿಸೆಂಬರ್ 2023, 6:28 IST
ಅಕ್ಷರ ಗಾತ್ರ

ಮವೂ: ಇಲ್ಲಿನ ಗ್ರಾಮವೊಂದರಲ್ಲಿ 14 ವರ್ಷದ ಬಾಲಕಿ ಮೇಲೆ 5ಜನರ ಗುಂಪೊಂದು ಸಾಮೂಹಿಕ ಅತ್ಯಾಚಾರ ಎಸಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿ.2 ರಂದು ಘಟನೆ ನಡೆದಿದ್ದು, ಡಿ.20 ರಂದು ದೂರು ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಅಧಿಕಾರಿ ಮಹೇಶ್‌ಸಿಂಗ್‌ ಅತ್ರಿ ಹೇಳಿದ್ದಾರೆ.

ಬಯಲು ಶೌಚಾಲಯಕ್ಕೆ ಹೋಗಿದ್ದ ಬಾಲಕಿಯನ್ನು 5 ಮಂದಿ ಆರೋಪಿಗಳು ಅಪಹರಿಸಿದ್ದಾರೆ. ಘಟನೆಯ ವಿಡಿಯೊ ಮಾಡಿ, ಈ ಬಗ್ಗೆ ಯಾರಿಗಾದರೂ ಹೇಳಿದರೆ ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿ ತಂದೆ ಸಲ್ಲಿಸಿದ ದೂರಿನ ಆಧಾರದಲ್ಲಿ ಪೊಲೀಸರು ಐವರು ದುಷ್ಕರ್ಮಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂ ಅಡಿಯಲ್ಲಿ ಹಾಗೂ ಪೋಕ್ಸೊ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದಾರೆ.

ಆರೋಪಿಗಳಲ್ಲಿ ಓರ್ವನನ್ನು ಬಂಧಿಸಿದ್ದು, ಪ್ರಕರಣದ ಕುರಿತು ತನಿಖೆ ಮಾಡಲಾಗುತ್ತಿದೆ. ಘಟನೆ ನಡೆದು ಇಷ್ಟು ದಿನಗಳ ನಂತರ ಯಾಕೆ ದೂರು ನೀಡಲಾಗಿದೆ ಎಂಬುದನ್ನೂ ಪರಿಶೀಲಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT