ಸೋಮವಾರ, 14 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದೆಹಲಿ: ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿದ್ದ 500 ಸ್ನೈ‍ಪರ್‌ ಗುಂಡುಗಳು ವಶ

Published : 9 ಸೆಪ್ಟೆಂಬರ್ 2024, 10:57 IST
Last Updated : 9 ಸೆಪ್ಟೆಂಬರ್ 2024, 10:57 IST
ಫಾಲೋ ಮಾಡಿ
Comments

ನವದೆಹಲಿ: ದ್ವಿಚಕ್ರ ವಾಹನದಲ್ಲಿ ಸಾಗಿಸಲಾಗುತ್ತಿದ್ದ 500 ಸ್ನೈಪರ್ ರೈಫಲ್ ಗುಂಡುಗಳನ್ನು ಪೂರ್ವದೆಹಲಿಯ ಮೋತಿ ನಗರ ಪ್ರದೇಶದಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಶನಿವಾರ ರಾತ್ರಿ ಎಂದಿನಂತೆ ವಾಹನಗಳನ್ನು ತಪಾಸಣೆ ಮಾಡುವಾಗ ಬಂದ ಬೈಕ್ ಅನ್ನು ನಿಲ್ಲಿಸಲು ಪೊಲೀಸರು ಸೂಚಿಸಿದ್ದಾರೆ. ಈ ವೇಳೆ ಬೈಕ್ ಸವಾರ ವೇಗ ಹೆಚ್ಚಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆತನನ್ನು ಪೊಲೀಸರು ಬೆನ್ನಟ್ಟಿದ್ದಾರೆ. ಈ ವೇಳೆ ಬೈಕ್ ಅನ್ನು ರಸ್ತೆ ಮಧ್ಯೆ ಬಿಟ್ಟು ಪರಾರಿಯಾಗಿದ್ದಾನೆ ಎಂದು ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸರು ಬೈಕ್ ಅನ್ನು ತಪಾಸಣೆ ನಡೆಸಿದ್ದು, ಈ ವೇಳೆ 10 ಬಾಕ್ಸ್‌ನಲ್ಲಿ 500 ಜೀವಂತ ಗುಂಡುಗಳು ‍ಪತ್ತೆಯಾಗಿವೆ. ಈ ಬಗ್ಗೆ ಮೋತಿ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ‍ಪೊಲೀಸರು ಬಂದು ಗುಂಡುಗಳನ್ನು ವಶಕ್ಕೆ ಪಡೆದಿದ್ದಾರೆ.

ಶಸ್ತ್ರಾಸ್ತ್ರ ಕಾಯ್ದೆಯಡಿ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ನಾವು ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಗುಂಡುಗಳನ್ನು ಎ.ಕೆ.–47, ಲೈಟ್ ಮಷಿನ್ ಗನ್‌, ಸೆಲ್ಪ್ ಲೋಡಿಂಗ್ ಗನ್ ಹಾಗೂ ಸ್ನೈಪರ್‌ ರೈಫಲ್‌ಗಳಲ್ಲಿ ಬಳಸಲಾಗುತ್ತದೆ. ಮೊನಚಾಗಿರುವ ಈ ಗುಂಡುಗಳನ್ನು ಹಾರಿಸಿದರೆ ದೊಡ್ಡ ಅಪಾಯ ಸಂಭವಿಸಲಿದೆ ಎಂದು ಹೆಸರು ಗುಪ್ತವಾಗಿಡಬೇಕು ಎನ್ನುವ ಷರತ್ತಿನೊಂದಿಗೆ ಅಧಿಕಾರಿಯೊಬ್ಬರು ಮಾಹಿತಿ ಹಂಚಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT