ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ | ದಟ್ಟ ಮಂಜು: 170 ವಿಮಾನಗಳ ಹಾರಾಟದಲ್ಲಿ ವ್ಯತ್ಯಯ

Published 17 ಜನವರಿ 2024, 4:19 IST
Last Updated 17 ಜನವರಿ 2024, 4:19 IST
ಅಕ್ಷರ ಗಾತ್ರ

ನವದೆಹಲಿ: ದಟ್ಟ ಮಂಜು ಕವಿದ ವಾತಾವರಣದಿಂದಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸುಮಾರು 170 ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ.

ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ (ಐಜಿಐ) ನಿಲ್ದಾಣದಲ್ಲಿ ರನ್‌ವೇ ಕಾಣಿಸದಷ್ಟು ದಟ್ಟವಾಗಿ ಮಂಜು ಆವರಿಸಿದ್ದರಿಂದ ದೆಹಲಿಯಿಂದ ಹೊರಡಬೇಕಿದ್ದ ಹಲವು ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿದ್ದು, 53 ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿಯಲ್ಲಿ ಕನಿಷ್ಠ ತಾಪಮಾನ 4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ಕಾಯುತ್ತಿರುವ ದೃಶ್ಯ ಕಂಡುಬಂದಿದೆ.

ದೆಹಲಿ ಸೇರಿದಂತೆ ನೆರೆ ರಾಜ್ಯಗಳಾದ ಪಂಜಾಬ್, ಹರ್ಯಾಣದಲ್ಲೂ ದಟ್ಟ ಮಂಜು ಆವರಿಸಿದೆ. ಅಲ್ಲದೇ ಮಂಜು ಕವಿದ ವಾತಾವರಣದಿಂದ ಸುಮಾರು 20 ರೈಲುಗಳ ಸಂಚಾರದಲ್ಲಿಯೂ ವ್ಯತ್ಯಯ ಉಂಟಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT