ನವದೆಹಲಿ: ಕನ್ನಡ ಸೇರಿದಂತೆ 13 ಭಾಷೆಗಳಲ್ಲಿ ಪ್ರಧಾನಿ ಅವರ ಅಧಿಕೃತ ವೆಬ್‌ಸೈಟ್ (www.pmindia.gov.in) ಈಗ ಲಭ್ಯವಿದೆ.

ಇಂಗ್ಲಿಷ್, ಹಿಂದಿ ಅಲ್ಲದೇ ಅಸ್ಸಾಮಿ, ಬಂಗಾಳಿ, ಗುಜರಾತಿ, ಮಲಯಾಳ, ಮಣಿಪುರಿ, ಮರಾಠಿ, ಒಡಿಯಾ, ಪಂಜಾಬಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲೂ ವೆಬ್‌ಸೈಟ್ ವೀಕ್ಷಿಸಬಹುದು.

‘ಆಯಾ ರಾಜ್ಯಗಳ ಸ್ಥಳೀಯ ಭಾಷೆಗಳಲ್ಲಿ ಅಲ್ಲಿನ ಜನರೊಂದಿಗೆ ಸಂವಹನ ನಡೆಸುವ ಪ್ರಧಾನಿ ನರೇಂದ್ರ ಮೋದಿ ಅವರ ಯತ್ನದ ಭಾಗವಾಗಿ ಪ್ರಾದೇಶಿಕ ಭಾಷೆಗಳಲ್ಲೂ ವೆಬ್‌ಸೈಟ್ ಆರಂಭಿಸಲಾಗಿದೆ. ಇದರಿಂದಾಗಿ ಅಭಿವೃದ್ಧಿ ಮತ್ತು ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ವಿಚಾರಗಳ ಬಗ್ಗೆ ಜನರು ಹಾಗೂ ಪ್ರಧಾನಿ ನಡುವಣ ಸಂವಹನ ಪ್ರಕ್ರಿಯೆ ಇನ್ನಷ್ಟು ವಿಸ್ತರಿಸುವ ನಿರೀಕ್ಷೆ ಇದೆ’ ಎಂದು ಪ್ರಧಾನಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.