ಮುಧೋಳ: ಪಿಎಫ್‌ಐ ಸೇರಿದಂತೆ ಯಾವುದೇ ಸಂಘಟನೆಗಳನ್ನು ರಾಜ್ಯದಲ್ಲಿ ನಿಷೇಧಿಸುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿಮಿತ್ತ ಶುಕ್ರವಾರ ಮುಧೋಳಕ್ಕೆ ತೆರಳುವ ಮಾರ್ಗದಲ್ಲಿ ಇಲ್ಲಿನ ಗದ್ದನಕೇರಿ ಬಳಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಬಿಜೆಪಿಯವರು ಅವಕಾಶವಾದಿ ರಾಜಕಾರಣ ಮಾಡುತ್ತಿದ್ದಾರೆ. ಪಿಎಫ್‌ಐ ನಿಷೇಧಿಸುವಂತೆ ಆಗ್ರಹಿಸುವ ಅವರೇ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಗ್ರಾಮ ಪಂಚಾಯ್ತಿಗಳಲ್ಲಿ ಅದೇ ಸಂಘಟನೆಯ ಬೆಂಬಲಿತ ಗ್ರಾಮ ಪಂಚಾಯ್ತಿ ಸದಸ್ಯರೊಂದಿಗೆ ಹೊಂದಾಣಿಕೆ ಮಾಡಿಕೊಂಡು ಅಧಿಕಾರ ನಡೆಸುತ್ತಿದ್ದಾರೆ ಎಂದು ಟೀಕಿಸಿದರು.

[Related]

ಮುಂದಿನ ಬಾರಿಯೂ ನಾವೇ ಅಧಿಕಾರಕ್ಕೆ ಬರಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಹೇಳಿದ ಅವರು ಬಿಜೆಪಿಯವರು ಅಧಿಕಾರಕ್ಕೆ ಬರುತ್ತೇವೆ ಎಂದು ಹಗಲುಗನಸು ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

‘ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದಾಗ ಅಪರಾಧ ಪ್ರಕರಣಗಳು ಹೆಚ್ಚಾಗಿದ್ದವು. ನಮ್ಮ ಸರಕಾರ ಬಂದ ಮೇಲೆ ಕಡಿಮೆಯಾಗಿವೆ’ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.