ನವದೆಹಲಿ: 4.8 ಲಕ್ಷ ಬೆಲೆಯ ಅಮೆರಿಕನ್ ಡಾಲರ್ ನೋಟುಗಳನ್ನು (ಸುಮಾರು ₹3.21 ಕೋಟಿ) ಕಳ್ಳಸಾಗಣೆ ಮಾಡಲು ಯತ್ನಿಸಿದ ಆರೋಪ ಮೇಲೆ ಜೆಟ್ ಏರ್ವೇಸ್ನ ಗಗನಸಖಿಯನ್ನು ಮಂಗಳವಾರ ಬಂಧಿಸಲಾಗಿದೆ.
ಜೆಟ್ ವಿಮಾನದ ಸಹಾಯಕಿಯು ದೆಹಲಿಯ ವಿವೇಕ್ ವಿಹಾರ್ ನಿವಾಸಿ ಅಮಿತ್ ಮಲ್ಹೋತ್ರಾ ಎಂಬಾತನಿಗೆ ಸೇರಿದ ನೋಟುಗಳನ್ನು ಹಾಳೆಯಲ್ಲಿ ಸುತ್ತಿ ಹಾಂಕಾಂಗ್ಗೆ ಸಾಗಿಸುತ್ತಿದ್ದಾಗ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಗಗನಸಖಿಯು ಸೋಮವಾರ ಹಾಂಕಾಂಗ್ಗೆ ತೆರಳುತ್ತಿದ್ದ ವಿಮಾನದಲ್ಲಿದ್ದಾಗ ಕಂದಾಯ ಗುಪ್ತಚರ ಇಲಾಖೆ ಅಧಿಕಾರಿಗಳು ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.
ಹವಾಲ ಜಾಲದ ಪ್ರಮುಖ ಸದಸ್ಯೆ: ಬಂಧಿನಕ್ಕೊಳಗಾಗಿರುವ ಮಹಿಳೆಯು ಜಾಗತಿಕ ಹವಾಲ ಜಾಲದ ಪ್ರಮುಖ ಸದಸ್ಯೆ ಎಂದು ಕಂದಾಯ ಗುಪ್ತಚರ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
ಈ ಜಾಲದಲ್ಲಿ ವಿಮಾನಯಾನ ಸಂಸ್ಥೆಯ ಇತರ ಸಿಬ್ಬಂದಿಯ ಪಾತ್ರದ ಬಗ್ಗೆಯೂ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.