ಕೇಂದ್ರಪಾರ: ಅಪ್ರಾಪ್ತ ಬಾಲಕನ ಮೇಲೆ ಅತ್ಯಾಚಾರ ಎಸಗಿದ 55 ವರ್ಷದ ವ್ಯಕ್ತಿಗೆ ಒಡಿಶಾದ ಕೇಂದ್ರಪಾರ ಜಿಲ್ಲೆಯ ನ್ಯಾಯಾಲಯವೊಂದು 20 ವರ್ಷ ಶಿಕ್ಷೆ ವಿಧಿಸಿದೆ.

ಪೋಕ್ಸೊ ನ್ಯಾಯಾಲಯವು ಈ ಶಿಕ್ಷೆ ವಿಧಿಸಿದ್ದು, ಜೊತೆಗೆ ₹50 ಸಾವಿರ ದಂಡವನ್ನೂ ವಿಧಿಸಿದೆ. ದಂಡ ಪಾವತಿಸಲು ವಿಫಲವಾದರೆ ಎರಡು ವರ್ಷಗಳ ಹೆಚ್ಚುವರಿ ಶಿಕ್ಷಯನ್ನು ಅನುಭವಿಸಬೇಕು ಎಂದು ಹೇಳಿದೆ.
.ಅತ್ಯಾಚಾರ: 14 ವರ್ಷದ ಬಾಲಕಿ ಎಂಟು ತಿಂಗಳ ಗರ್ಭಿಣಿ.
2021ರಲ್ಲಿ ದಾಖಲಾದ ಪ್ರಕರಣ ಇದಾಗಿದ್ದು, ದನದ ಹಟ್ಟಿಯಲ್ಲಿ ತನ್ನ ಮಗನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತನ ತಾಯಿ ದೂರು ಸಲ್ಲಿಸಿದ್ದರು.

ಗುರುವಾರ ತೀರ್ಪು ಪ್ರಕಟಿಸಿದ ನ್ಯಾಯಾಲಯವು, 14 ವರ್ಷದ ಸಂತ್ರಸ್ತ ಬಾಲಕನಿಗೆ ₹5 ಲಕ್ಷ ಪರಿಹಾರ ನೀಡಬೇಕು ಎಂದು ಒಡಿಶಾ ಕಾನೂನು ಸೇವಾ ಆಯೋಗಕ್ಕೆ ಸೂಚನೆ ನೀಡಿದೆ.
.ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ರೆ ಮೇಲೆ ಅತ್ಯಾಚಾರ: ಅಪರಾಧಿಗೆ 10 ವರ್ಷ ಜೈಲು.
ಭಾರತೀಯ ದಂಡ ಸಂಹಿತೆಯ ಸೆಕ್ಷನ್ 377 (ಅಸಹಜ ಲೈಂಗಿಕ ಕ್ರಿಯೆ), ಸೆಕ್ಷನ್ 6 (ಲೈಂಗಿಕ ಆಕ್ರಮಣ) ಹಾಗೂ ಪೋಕ್ಸೊ ಕಾಯ್ದೆಯಡಿ ಶಿಕ್ಷೆ ವಿಧಿಸಿದೆ.

ಬಾಲಕ ಸೇರಿ ಒಟ್ಟು 10 ಮಂದಿ ಸಾಕ್ಷ್ಯ ನುಡಿದಿದ್ದಾರೆ.
.ಬೀದರ್ | ಅಪ್ರಾಪ್ತೆ ಮೇಲೆ ಅತ್ಯಾಚಾರ; ಅಪರಾಧಿಗೆ ಜೀವಾವಧಿ ಶಿಕ್ಷೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.