ನವದೆಹಲಿ: ಮುಂದಿನ ವರ್ಷ ಐದು ರಾಜ್ಯಗಳಲ್ಲಿ ನಡೆಯಬೇಕಿರುವ ವಿಧಾನಸಭಾ ಚುನಾವಣೆಗಳ ದಿನಾಂಕ ಮತ್ತು ವೇಳಾಪಟ್ಟಿಯನ್ನು ಇನ್ನೂ ನಿರ್ಧರಿಸಬೇಕಿದೆ ಎಂದು ಚುನಾವಣಾ ಆಯೋಗ ಗುರುವಾರ ಸ್ಪಷ್ಟಪಡಿಸಿದೆ.
ಚುನಾವಣೆಗಳನ್ನು ಒಟ್ಟಾಗಿ ನಡೆಸಲಾಗುತ್ತದೆ ಎಂಬ ವರದಿಗಳನ್ನು ಆಯೋಗ ಅಲ್ಲಗಳೆದಿದೆ.
`ಮಾಧ್ಯಮ ವರದಿಗಳು ಸಂಪೂರ್ಣ ಆಧಾರರಹಿತ~ ಎಂದು ಆಯೋಗವು ಹೇಳಿಕೆಯಲ್ಲಿ ತಿಳಿಸಿದೆ.
ಉತ್ತರಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಮತ್ತು ಗೋವಾದ ವಿಧಾನಸಭೆಗಳಿಗೆ 2012ರಲ್ಲಿ ಚುನಾವಣೆ ನಡೆಯಬೇಕಿದೆ.