ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಎರಡು ಪ್ರತ್ಯೇಕ ಅಪಘಾತ: 11 ಜನ ಸಾವು

Published 9 ಜುಲೈ 2024, 3:19 IST
Last Updated 9 ಜುಲೈ 2024, 3:19 IST
ಅಕ್ಷರ ಗಾತ್ರ

ಪಟ್ನಾ/ ಲಖನೌ: ಬಿಹಾರ ಮತ್ತು ಉತ್ತರಪ್ರದೇಶದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ 11 ಜನರು ಮೃತಪಟ್ಟು 14 ಜನರು ಗಾಯಗೊಂಡಿದ್ದಾರೆ.

ಬಿಹಾರದ ಬೇಗುಸರಯ್‌ ಜಿಲ್ಲೆಯಲ್ಲಿ ಆಟೊ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ 6 ಜನರು ಮೃತಪಟ್ಟಿದ್ದಾರೆ.

ಇಲ್ಲಿನ ರಾಷ್ಟ್ರೀಯ ಹೆದ್ದಾರಿ 31ರಲ್ಲಿ ಈ ಅವಘಡ ಸಂಭವಿಸಿದೆ. ಕಾರು ಮತ್ತು ಆಟೊ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಜರುಗಿದೆ.

ಘಟನೆಯಲ್ಲಿ 6 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಆಟೊ ಸಿಮಾರಿಯಾದಿಂದ ಜೆರೊಮೈಲ್‌ ಕಡೆಗೆ ಪ್ರಯಾಣಿಸುತ್ತಿತ್ತು.

ಉತ್ತರ ಪ್ರದೇಶ: ಅಮೇಥಿಯಲ್ಲಿ ಬಸ್‌ ಮತ್ತು ಟ್ರಕ್‌ ನಡುವೆ ಸಂಭವಿಸಿದ ಅಪಘಾತದ ಐವರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ.

ಬಿಹಾರಕ್ಕೆ ತೆರಳುತ್ತಿದ್ದ ಬಸ್‌ ಮಂಗಳವಾರ ಮುಂಜಾನೆ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲಿ ಐವರು ಮೃತಪಟ್ಟಿದ್ದಾರೆ. 12 ಜನ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT