ನವದೆಹಲಿ: ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ, ವಿಚಾರಣೆಗೆ ಅನುಮತಿ ನೀಡಲಾಗಿರುವ ಮತ್ತು ಅಮಾನತ್ತಿನಲ್ಲಿರುವ ಸರ್ಕಾರಿ ನೌಕರರಿಗೆ ಇನ್ನು ಮುಂದೆ ಪಾಸ್‌ಪೋರ್ಟ್ ಪಡೆಯಲು ಅವಕಾಶವಿಲ್ಲ ಎಂದು ಸಿಬ್ಬಂದಿ ಸಚಿವಾಲಯ ಆದೇಶ ಹೊರಡಿಸಿದೆ.

ಕೇಂದ್ರ ಜಾಗೃತ ದಳ ಮತ್ತು ವಿದೇಶಾಂಗ ಸಚಿವಾಲಯಗಳೊಂದಿಗೆ ಸಮಾಲೋಚನೆ ನಡೆಸಿ, ಸಿಬ್ಬಂದಿ ಸಚಿವಾಲಯದಲ್ಲಿ ಈಗಾಗಲೇ ಇರುವ ಮಾರ್ಗಸೂಚಿಗಳಲ್ಲಿ ಕೆಲವು ಬದಲಾವಣೆ ತರಲಾಗಿದೆ.

ಜಾಗೃತ ದಳ ಒಪ್ಪಿಗೆ ನೀಡಿದ ಬಳಿಕವಷ್ಟೇ ಸರ್ಕಾರಿ ನೌಕರರಿಗೆ ಪಾಸ್‌ಪೋರ್ಟ್ ನೀಡಲಾಗುವುದು ಎಂದು ಆದೇಶದಲ್ಲಿ ಹೇಳಲಾಗಿದೆ.

ಕ್ರಿಮಿನಲ್ ಪ್ರಕರಣ ಅಥವಾಭ್ರಷ್ಟಾಚಾರ ತಡೆ ಕಾಯ್ದೆ ಅನ್ವಯ ನೌಕರನ ಮೇಲೆ ಯಾವುದೇ ತನಿಖಾ ಸಂಸ್ಥೆಯು ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಿದ್ದರೆ ಅಂಥವರಿಗೆ ಪಾಸ್‌ಪೋರ್ಟ್ ನೀಡುವುದನ್ನು ಜಾಗೃತ ದಳವು ತಡೆಯಬಹುದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.