ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ: ಕುಟುಂಬ ಸದಸ್ಯರು, ವಕೀಲರಿಗೆ ಕರೆ ಮಾಡಲು ಕೈದಿಗಳಿಗೆ Smart Card

Published 17 ಏಪ್ರಿಲ್ 2024, 10:19 IST
Last Updated 17 ಏಪ್ರಿಲ್ 2024, 10:19 IST
ಅಕ್ಷರ ಗಾತ್ರ

ಛತ್ರಪತಿ ಸಾಂಭಾಜಿನಗರ್(ಮಹಾರಾಷ್ಟ್ರ): ಮಹಾರಾಷ್ಟ್ರದ ಛತ್ರಪತಿ ಸಾಂಭಾಜಿನಗರದ ಹರ್ಸೂಲ್ ಕೇಂದ್ರ ಕಾರಾಗೃಹದ 650 ಕೈದಿಗಳಿಗೆ ತಮ್ಮ ಕುಟುಂಬ ಸದಸ್ಯರು ಮತ್ತು ವಕೀಲರ ಜೊತೆ ಸಂಪರ್ಕದಲ್ಲಿರಲು ಸ್ಮಾರ್ಟ್ ಕಾರ್ಡ್ ವಿತರಿಸಲಾಗಿದೆ ಎಂದು ಬುಧವಾರ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸ್ಮಾರ್ಟ್ ಕಾರ್ಡ್ ವಾರದಲ್ಲಿ ಮೂರು ಬಾರಿ ಉಚಿತ ಕರೆ ಮಾಡಲು ಅವಕಾಶ ಮಾಡಿಕೊಡುತ್ತದೆ. ಒಮ್ಮೆ ಕರೆ ಮಾಡಿದರೆ 6 ನಿಮಿಷಗಳವರೆಗೆ ಮಾತನಾಡಬಹುದಾಗಿದೆ ಎಂದು ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಆರ್ಥಿಕ ಮುಗ್ಗಟ್ಟಿನ ಕಾರಣ ಹಲವು ಕೈದಿಗಳ ಕುಟುಂಬಸ್ಥರು ಜೈಲಿಗೆ ಭೇಟಿ ನೀಡಲು ಸಾಧ್ಯವಿಲ್ಲ. ಹಾಗಾಗಿ, ಕೈದಿಗಳು ಅವರ ಕುಟುಂಬದವರು, ವಕೀಲರ ಜೊತೆ ಸಂಪರ್ಕದಲ್ಲಿರಲು ಹರ್ಸೂಲ್ ಜೈಲಿನ 650 ಕೈದಿಗಳಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಾಗಿದೆ’ ಎಂದು ಪ್ರಕಟಣೆ ತಿಳಿಸಿದೆ.

ಆದರೆ, ಜೈಲಿನ ಅಧಿಕಾರಿಗಳ ಜೊತೆ ಹಂಚಿಕೊಳ್ಳಲಾದ ಸಂಖ್ಯೆಗಳಿಗೆ ಮಾತ್ರ ಕರೆ ಮಾಡಲು ಅವಕಾಶವಿದೆಯೇ ಅಥವಾ ಬೇರೆ ಸಂಖ್ಯೆಗಳಿಗೂ ಕರೆ ಮಾಡಬಹುದೇ ಎಂಬ ಬಗ್ಗೆ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿಲ್ಲ.

ಜೈಲಿನ ಆವರಣದಲ್ಲಿ ಕಾಲಿಂಗ್ ಬೂತ್‌ಗಳ ವ್ಯವಸ್ಥೆ ಮಾಡಲಾಗಿದೆ.

ಮಹಾರಾಷ್ಟ್ರದ 9 ಕೇಂದ್ರ ಕಾರಾಗೃಹಗಳ ಪೈಕಿ ಹರ್ಸೂಲ್ ಸಹ ಒ'ದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT