ಫುಲಬಾನಿ(ಒಡಿಶಾ): ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ 67 ವರ್ಷದ ವ್ಯಕ್ತಿಗೆ ಒಡಿಶಾದ ಕಂಧಮಾಲ್ ಜಿಲ್ಲೆಯ ಫುಲಭಾನಿಯ ನ್ಯಾಯಾಧೀಶರು 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ್ದಾರೆ.

ಫುಲಬಾನಿಯ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಹಾಗೂ ವಿಶೇಷ ಪೊಕ್ಸೊ ನ್ಯಾಯಾಧೀಶ ಸಂಜಿತ್ ಕುಮಾರ್ ಬೆಹೆರಾ ಶುಕ್ರವಾರ ಅಪರಾಧಿ ಅನಂಗಾ ನಾಯಕ್ಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹20,000 ದಂಡ ವಿಧಿಸಿದ್ದಾರೆ.

ಸೆಪ್ಟೆಂಬರ್ 22, 2020ರಂದು ಮನೆಯ ಮುಂದೆ ಆಟವಾಡುತ್ತಿದ್ದ 5 ವರ್ಷದ ಬಾಲಕಿಗೆ ಆಮಿಷ ಒಡ್ಡಿ ಕರೆದೊಯ್ದ ವೃದ್ಧ ಅತ್ಯಾಚಾರ ಎಸಗಿದ್ದ.

ಬಾಲಕಿಯ ತಾಯಿ ಅದೇ ದಿನ ರಾತ್ರಿ ಉದಯಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಳಿಕ, ಆರೋಪಿಯನ್ನು ಬಂಧಿಸಲಾಗಿತ್ತು ಎಂದು ಸರ್ಕಾರಿ ವಕೀಲ ಅಸೀಂ ಪ್ರಹರಾಜ್ ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು 16 ಸಾಕ್ಷ್ಯಗಳನ್ನು ಪರಿಶೀಲಿಸಿದೆ. ಅಲ್ಲದೆ, ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ ₹6 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ, ಕಂಧಮಾಲ್ನ ಕಾನೂನು ಸೇವಾ ಪ್ರಾಧಿಕಾರಕ್ಕೆ ಸೂಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.