ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರದಲ್ಲಿ ಅಗ್ನಿ ಅನಾಹುತ: 7 ಸಾವು

Published 3 ಏಪ್ರಿಲ್ 2024, 2:14 IST
Last Updated 3 ಏಪ್ರಿಲ್ 2024, 2:14 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದ ಔರಂಗಬಾದ್‌ ಜಿಲ್ಲೆಯ ಛತ್ರಪತಿ ಸಂಭಾಜಿ ನಗರದಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಏಳು ಜನರು ಮೃತಪಟ್ಟಿದ್ದಾರೆ.

ಬೆಳಗ್ಗೆ 4 ಗಂಟೆ ಸುಮಾರಿಗೆ ಟೈಲರಿಂಗ್‌ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಮೂವರು ಮಹಿಳೆಯರು, ಇಬ್ಬರು ಮಕ್ಕಳು ಸೇರಿ ಏಳು ಜನರು ಮೃತಪಟ್ಟಿದ್ದಾರೆ. ಎಂದು ಸಂಭಾಜಿ ನಗರದ ಪೊಲೀಸ್ ಅಧಿಕಾರಿ ಮನೋಜ್ ಲೋಹಿಯಾ ಮಾಹಿತಿ ನೀಡಿದ್ದಾರೆ.

ಈ ದುರ್ಘಟನೆಯಲ್ಲಿ ಮೃತರನ್ನು ಹೊರತು ಪಡಿಸಿದರೆ ಬೇರೆ ಯಾರಿಗೂ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಅವರು ಹೇಳಿದ್ದಾರೆ.

ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರಿಂದ ಮಾಹಿತಿ ಪಡೆದು ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಘಟನೆ ಬಗ್ಗೆ ತನಿಖೆ ಮಾಡಲಾಗುತ್ತಿದೆ ಎಂದು ಮನೋಜ್ ಲೋಹಿಯಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT