ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಪ್ರಮಾಣ ವಚನ: ನೆರೆ ದೇಶಗಳ ನಾಯಕರು ಭಾಗಿ

Published 9 ಜೂನ್ 2024, 14:27 IST
Last Updated 9 ಜೂನ್ 2024, 14:27 IST
ಅಕ್ಷರ ಗಾತ್ರ

ನವದೆಹಲಿ: ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭದಲ್ಲಿ ಭಾರತದ ನೆರೆಹೊರೆಯ ದೇಶಗಳ ನಾಯಕರು ಭಾಗವಹಿಸಿದ್ದರು.

ಮಾಲ್ದೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜು, ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ ‘ಪ್ರಚಂಡ’, ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜಗನ್ನಾಥ್, ಭೂತಾನ್ ಪ್ರಧಾನಿ ಶೆರಿಂಗ್ ತೊಬ್ಗೆ ಅವರು ಪಾಲ್ಗೊಂಡಿದ್ದರು.

ಬಾಂಗ್ಲಾದೇಶದ ಅಧ್ಯಕ್ಷೆ ಶೇಖ್ ಹಸೀನಾ, ಸೆಷೆಲ್ಸ್ ಉಪಾಧ್ಯಕ್ಷ ಅಹಮದ್ ಆಫಿಫ್ ಅವರೂ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮುಯಿಜು ಅವರು ಮಾಲ್ದೀವ್ಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಭಾರತಕ್ಕೆ ಭೇಟಿ ನೀಡಿದ್ದು ಇದೇ ಮೊದಲು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT