ಗುರುವಾರ, 30 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತ್ಯೇಕ ಅಪಘಾತ:11 ಮಂದಿ ಸಾವು

Published 29 ಅಕ್ಟೋಬರ್ 2023, 13:26 IST
Last Updated 29 ಅಕ್ಟೋಬರ್ 2023, 13:26 IST
ಅಕ್ಷರ ಗಾತ್ರ

ಜೈಪುರ/ಬಲ್ಲಿಯಾ: ರಾಜಸ್ಥಾನದ ಹನುಮಗಢ ಮತ್ತು ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಅಪಘಾತದಲ್ಲಿ 11 ಮಂದಿ ಮೃತಪಟ್ಟಿದ್ದಾರೆ.

ರಾಜಸ್ಥಾನದ ಲಾಖುವಾಲಿ ಮತ್ತು ಶೇರ್‌ಗಢ ನಡುವಿನ ಮೆಗಾ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ಕಾರು ಮತ್ತು ಟ್ರಕ್‌ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಮಹಿಳೆಯರು ಸೇರಿ ಒಂದೇ ಕುಟುಂಬದ ಏಳು ಮಂದಿ ಸಾವಿಗೀಡಾಗಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. 

ಸಂತ್ರಸ್ತರೆಲ್ಲರೂ ಹುಟ್ಟುಹಬ್ಬದ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮನೆಗೆ ವಾಪಸ್‌ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತಕ್ಕೆ ಮುಖ್ಯಮಂತ್ರಿ ಅಶೋಕ್ ಗೆಹಲೋತ್‌ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ನಿಂತಿದ್ದ ಆಟೊಗೆ ಡಿಕ್ಕಿ:

ಉತ್ತರ ಪ್ರದೇಶದಲ್ಲಿ ಭಾನುವಾರ ಮುಂಜಾನೆ ನಿಂತಿದ್ದ ಆಟೊ ರಿಕ್ಷಾಗೆ ವಾಹನವೊಂದು ಡಿಕ್ಕಿಯಾದ ಪರಿಣಾಮ ಕನಿಷ್ಠ ನಾಲ್ವರು ಮೃತಪಟ್ಟು, ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಮತ್ತು ಸಂತ್ರಸ್ತರು ಅಡುಗೆ ಕೆಲಸ ಮಾಡುತ್ತಿದ್ದರು. ಮದುವೆ ಸಮಾರಂಭದಲ್ಲಿ ಅಡುಗೆ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಎಸ್‌.ಆನಂದ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT