ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

7 ವರ್ಷದ ಬಾಲಕಿಯ ಮೇಲೆ 60 ವರ್ಷದ ವೃದ್ಧನಿಂದ ಲೈಂಗಿಕ ದೌರ್ಜನ್ಯ

Last Updated 11 ಮಾರ್ಚ್ 2023, 7:41 IST
ಅಕ್ಷರ ಗಾತ್ರ

ನವದೆಹಲಿ: ಏಳು ವರ್ಷದ ಬಾಲಕಿ ಮೇಲೆ 60 ವರ್ಷದ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸೆಗಿರುವ ಘಟನೆ ಇಲ್ಲಿನ ಗುಲಾಬಿ ಬಾಗ್ ಪ್ರದೇಶದಲ್ಲಿ ನಡೆದಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಈ ಸಂಬಂಧ ಸಂತ್ರಸ್ತೆ ಮತ್ತು ಆಕೆಯ ತಾಯಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ‘2ನೇ ತರಗತಿ ಓದುತ್ತಿರುವ ತನ್ನ ಏಳು ವರ್ಷದ ಮಗಳ ಮೇಲೆ ನೆರೆ ಮನೆಯಲ್ಲಿ ವಾಸವಾಗಿದ್ದ 60 ವರ್ಷ ವಯಸ್ಸಿನ ಬದರಿನಾಥ್ ಎಂಬಾತ 8–10 ದಿನಗಳಿಂದ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಸಂತ್ರಸ್ತೆ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಬುಧವಾರದಂದು ಆರೋಪಿ ಬದರಿನಾಥ್, ಬಾಲಕಿಯ ಬಟ್ಟೆ ತೆಗೆದು ಆಕೆಯ ಖಾಸಗಿ ಅಂಗಗಳನ್ನು ಮುಟ್ಟಿದ್ದಾನೆ. ಈ ಬಗ್ಗೆ ತನ್ನ ತಾಯಿಗೆ ತಿಳಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಭಾರತೀಯ ದಂಡ ಸಂಹಿತೆ 376 ಮತ್ತು ಪೋಕ್ಸೋ ಕಾಯಿದೆ 6ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅಪರಾಧದ ಸ್ಥಳ ಪರಿಶೀಲನೆಗಾಗಿ ವಿಧಿ ವಿಜ್ಞಾನ ತಂಡವನ್ನು ಕಳುಹಿಸಲಾಗಿದೆ. ಬಾಲಕಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT