ಹರಿದ್ವಾರ: ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಕಳ್ಳಬಟ್ಟಿ ಕುಡಿದು ಸಾವಿಗೀಡಾದವರ ಸಂಖ್ಯೆ 77ಕ್ಕೆ ಏರಿದೆ.

ಉತ್ತರಾಖಂಡದ ಹರಿದ್ವಾರ ಜಿಲ್ಲೆಯ ಬಾಲುಪುರ ಮತ್ತು ಸುತ್ತಲಿನ ಗ್ರಾಮಗಳಲ್ಲಿ 24 ಜನ ಮೃತಪಟ್ಟಿದ್ದರೆ, ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯಲ್ಲಿ 46 ಜನ ಅಸುನೀಗಿದ್ದಾರೆ.

ಶನಿವಾರ ಇನ್ನೂ ಕೆಲವರು ಅಸುನೀಗಿದ್ದು, ಅವರ ಸಾವಿಗೂ ಕಳ್ಳಬಟ್ಟಿ ಸೇವನೆ ಕಾರಣವೇ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಸಂಬಂಧ ತನಿಖೆಗೆ ಆದೇಶಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದಾದ್ಯಂತ ಕಳ್ಳಬಟ್ಟಿ ವಿರುದ್ಧ ಕಾರ್ಯಾಚರಣೆ ನಡೆಸುವಂತೆ ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸೂಚಿಸಿದ್ದಾರೆ. ಜೊತೆಗೆ ಮೃತರ ಕುಟುಂಬಸ್ಥರಿಗೆ ಸೂಕ್ತ ಪರಿಹಾರಒದಗಿಸುವ ಭರವಸೆಯನ್ನೂನೀಡಿದ್ದಾರೆ.

ಘಟನೆಗೆ ಸಂಬಂಧಿಸಿ 175 ಮಂದಿ ತಪ್ಪಿತಸ್ಥರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.