ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶ ‌‌| ಅಪರಿಚಿತ ವಾಹನಕ್ಕೆ ಜೀಪ್ ಡಿಕ್ಕಿ: 8 ಮಂದಿ ಸಾವು

Published 16 ಮೇ 2024, 2:22 IST
Last Updated 16 ಮೇ 2024, 2:22 IST
ಅಕ್ಷರ ಗಾತ್ರ

ಇಂದೋರ್(ಮಧ್ಯಪ್ರದೇಶ): ಇಂದೋರ್-ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ತಡರಾತ್ರಿ ನಡೆದ ಅಘಘಾತದಲ್ಲಿ 8 ಮಂದಿ ಮೃತಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

‘ರಾಷ್ಟ್ರೀಯ ಹೆದ್ದಾರಿಯ ಘಾಟಾಬಿಲ್ಲೋಡ್ ಬಳಿ ಜೀಪ್‌ವೊಂದು ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಎಂಟು ಮಂದಿ ಮೃತಪಟ್ಟಿರುವುದು ದೃಢಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರೂಪೇಶ್ ಕುಮಾರ್ ದ್ವಿವೇದಿ ಹೇಳಿದ್ದಾರೆ.

ಅಪಘಾತದ ನಂತರ ಅಪರಿಚಿತ ವಾಹನದ ಚಾಲಕ ಪರಾರಿಯಾಗಿದ್ದಾನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT