ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

Photos| ವಾಯುಪಡೆ ಸಂಸ್ಥಾಪನಾ ದಿನದಲ್ಲಿ ಯುದ್ಧ ವಿಮಾನಗಳ ಸಾಹಸ

ಭಾರತೀಯ ವಾಯುಪಡೆಯ 88ನೇ ಸಂಸ್ಥಾಪನಾ ದಿನವನ್ನು ಗುರುವಾರ ಆಚರಿಸಲಾಯಿತು. ಈ ದಿನದ ಅಂಗವಾಗಿ ಉತ್ತರ ಪ್ರದೇಶದ ಘಜಿಯಾಬಾದ್‌ ಹಿಂಡನ್‌ ವಾಯುನೆಲೆಯಲ್ಲಿ ಪಥಸಂಚನ, ಯುದ್ಧ ವಿಮಾನ ಪ್ರದರ್ಶನ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಸಮಾರಂಭದಲ್ಲಿ ಸಿಡಿಎಸ್‌ ಬಿಪಿನ್ ರಾವತ್, ವಾಯುಪಡೆ ಮುಖ್ಯಸ್ಥ ರಾಕೇಶ್‌ ಕುಮಾರ್‌ ಸಿಂಗ್‌ ಬದೌರಿಯಾ, ಸೇನಾ ಮುಖ್ಯಸ್ಥ, ಜನರಲ್ ಮನೋಜ್ ಮುಕುಂದ್ ನರವಾಣೆ, ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಯುದ್ಧ ವಿಮಾನಗಳ ಸಾಹಸ ಪ್ರದರ್ಶನ ಮೈನವಿರೇಳಿಸಿತು.ರಾಷ್ಟ್ರಪತಿ, ಪ್ರಧಾನಮಂತ್ರಿ, ರಕ್ಷಣಾ ಸಚಿವ, ಗೃಹಸಚಿವರೂ ಸೇರಿದಂತೆ ಭಾರತದ ಹಲವು ಗಣ್ಯರುಸಂಸ್ಥಾಪನಾ ದಿನದ ಶುಭ ಕೋರಿದ್ದಾರೆ.
Published : 8 ಅಕ್ಟೋಬರ್ 2020, 6:37 IST
ಫಾಲೋ ಮಾಡಿ
Comments
ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT