ಸಹರನ್‌ಪುರ/ಲಖನೌ: ಉತ್ತರಪ್ರದೇಶದ ಸಹರನ್‌ಪುರ ಜಿಲ್ಲೆಯ ರೇಧಿಬೋಡ್ಕಿ ಗ್ರಾಮದ ಬಳಿ ಟ್ರ್ಯಾಕ್ಟರ್ ಟ್ರ್ಯಾಲಿ ನಾಲೆಗೆ ಉರುಳಿ ನಾಲ್ವರು ಮಕ್ಕಳು ಸೇರಿದಂತೆ ಒಂಬತ್ತು ಮಂದಿ ಮೃತಪಟ್ಟಿದ್ದಾರೆ.
ರಾಂಡೌಲ್ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು 50 ಮಂದಿ ಟ್ರ್ಯಾಕ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ನಾಲೆಯಲ್ಲಿ ರಭಸವಾಗಿ ನೀರು ಹರಿಯುತ್ತಿದ್ದುದರಿಂದ ಹಲವು ಮಂದಿ ಕೊಚ್ಚಿಹೋಗಿದ್ದರು. ಐವರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಉಳಿದವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ವಿವರಿಸಿದ್ದಾರೆ.