ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಒಡಿಶಾ: ಶಾಖಾಘಾತದಿಂದ ಕಳೆದ 72 ಗಂಟೆಗಳಲ್ಲಿ 99 ಮಂದಿ ಸಾವು

Published 3 ಜೂನ್ 2024, 3:11 IST
Last Updated 3 ಜೂನ್ 2024, 3:11 IST
ಅಕ್ಷರ ಗಾತ್ರ

ಭುವನೇಶ್ವರ: ಒಡಿಶಾದಲ್ಲಿ ತಾಪಮಾನ ಹೆಚ್ಚಳವಾಗಿದ್ದು, ರಾಜ್ಯದಾದ್ಯಂತ ಶಾಖಾಘಾತದ ಲಕ್ಷಣಗಳಿಂದ ಕಳೆದ 72 ಗಂಟೆಗಳಲ್ಲಿ 99 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಡಿಶಾದಲ್ಲಿ ಬಿಸಿಲಿನ ತಾಪಕ್ಕೆ ಅನಾರೋಗ್ಯ ಸಮಸ್ಯೆಗೆ ಒಳಗಾಗುವವರ ಸಂಖ್ಯೆ ಹೆಚ್ಚುತ್ತಲೇ ಇದ್ದು, ರಾಜ್ಯದ ಹಲವೆಡೆ ಈವರೆಗೆ 141 ಮಂದಿ ಶಾಖಾಘಾತದಿಂದ ಮೃತಪಟ್ಟಿರುವುದಾಗಿ ವರದಿಯಾಗಿದೆ. ಆದರೆ, 26 ಮಂದಿ ಶಾಖಾಘಾತದಿಂದಲೇ ಮೃತಪಟ್ಟಿದ್ದಾರೆ ಎಂಬುದನ್ನು ಅಧಿಕಾರಿಗಳು ಖಚಿತಪಡಿಸಿದ್ದಾರೆ.

ರೂರ್ಕೆಲಾದಲ್ಲಿ ಶುಕ್ರವಾರ ಶಾಖಾಘಾತದ ಲಕ್ಷಣಗಳಿಂದ 10 ಮಂದಿ ಮೃತಪಟ್ಟಿದ್ದರು. ಆ ಪೈಕಿ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಎಂಟು ಜನರು ಸಾವನ್ನಪ್ಪಿದ್ದರು, ಉಳಿದವರು ಇಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ಬಂದಾಗ ಅವರ ದೇಹದ ಉಷ್ಣತೆಯು ಸುಮಾರು 103-104 ಡಿಗ್ರಿ ಫ್ಯಾರನ್‌ಹೀಟ್ ಆಗಿತ್ತು. ಇದು ತೀವ್ರವಾದ ಶಾಖದ ಅಲೆಯಿಂದಾಗಿ ಸಂಭವಿಸಿರುವ ಸಾಧ್ಯತೆ ಇದೆ. ಇನ್ನೂ ಕೆಲವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರೂರ್ಕೆಲಾ ಸರ್ಕಾರಿ ಆಸ್ಪತ್ರೆಯ ಪ್ರಭಾರ ನಿರ್ದೇಶಕಿ (ಡಿಐಸಿ) ಡಾ. ಸುಧಾರಾಣಿ ಪ್ರಧಾನ್ ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT