ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿಯಲ್ಲಿ ಆಧಾರ್‌ ಸೇವಾ ಕೇಂದ್ರ

Last Updated 9 ಅಕ್ಟೋಬರ್ 2018, 20:15 IST
ಅಕ್ಷರ ಗಾತ್ರ

ನವದೆಹಲಿ: ರಾಜ್ಯದ ಹುಬ್ಬಳ್ಳಿ ಸೇರಿ ದೇಶದ 53 ನಗರಗಳಲ್ಲಿ ಆಧಾರ್‌ ಸೇವಾ ಕೇಂದ್ರಗಳನ್ನು ಆರಂಭಿಸಲು ಭಾರತದ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ)₹300 ಕೋಟಿಯಿಂದ ₹400 ಕೊಟಿ ಅಂದಾಜು ವೆಚ್ಚದ ಯೋಜನೆ ರೂಪಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಪಾಸ್‌ಪೋರ್ಟ್‌ ಸೇವಾ ಕೇಂದ್ರಗಳಂತೆ ಈ ಕೇಂದ್ರಗಳು ಕಾರ್ಯನಿರ್ವಹಿಸಲಿವೆ. ಆಧಾರ್‌ ನೋಂದಣಿ, ತಿದ್ದುಪಡಿ, ಬದಲಾವಣೆ ಸೇರಿ ಇತರೆ ಚಟುವಟಿಕೆ ನಡೆಸಲಿವೆ. ಬ್ಯಾಂಕು, ಅಂಚೆ ಕಚೇರಿ, ಸರ್ಕಾರಿ ಕಚೇರಿಗಳ ಆವರಣದಲ್ಲಿ ಈಗಿರುವ 30,000 ಕೇಂದ್ರಗಳ ಜೊತೆಗೆ ಈ ಸೇವಾ ಕೇಂದ್ರಗಳು ಕಾರ್ಯನಿರ್ವಹಿಸಲಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೆಟ್ರೋ ನಗರಗಳಲ್ಲಿ ತಲಾ ನಾಲ್ಕು ಹಾಗೂ ಉಳಿದ ನಗರಗಳಲ್ಲಿ ತಲಾ ಎರಡು ಕೇಂದ್ರಗಳನ್ನು ಆರಂಭಿಸಲಾಗುವುದು. 2019ರ ಏಪ್ರಿಲ್‌ ತಿಂಗಳಿನಿಂದ ಈ ಸೇವಾ ಕೇಂದ್ರಗಳು ಕಾರ್ಯಾರಂಭ ಮಾಡಲಿವೆ. ಪ್ರತಿನಿತ್ಯ ನಾಲ್ಕು ಲಕ್ಷ ಜನರು ಆಧಾರ್‌ ಮಾಹಿತಿಯ ತಿದ್ದುಪಡಿ, ವಿಳಾಸ ಬದಲಾವಣೆಗೆ ಅರ್ಜಿ ಸಲ್ಲಿಸುತ್ತಿದ್ದಾರೆ. ನಿತ್ಯ ಒಂದು ಲಕ್ಷ ಮಂದಿ ಆಧಾರ್‌ ನೋಂದಣಿ ಮಾಡಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.

ಪಾಸ್‌ಪೋರ್ಟ್‌ ಕೇಂದ್ರಗಳು

ಪ್ರತಿ ಲೋಕಸಭಾ ಕ್ಷೇತ್ರದಲ್ಲಿಯೂ ಅಂಚೆ ಕಚೇರಿ ಮತ್ತುಪಾಸ್‌ಪೋರ್ಟ್‌ ಸೇವಾ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಕೇಂದ್ರ ಸಂವಹನ ಸಚಿವ ಮನೋಜ್‌ ಸಿನ್ಹಾ ಹೇಳಿದ್ದಾರೆ.

‘221 ನಗರಗಳಲ್ಲಿ ಈಗಾಗಲೇ ಅಂಚೆ ಕಚೇರಿ ಪಾಸ್‌ಪೋರ್ಟ್‌ ಸೇವಾ ಕೇಂದ್ರಗಳು ಆರಂಭವಾಗಿವೆ. ಹೊಸ ಕೇಂದ್ರಗಳನ್ನು ಆರಂಭಿಸಲು 491 ಸ್ಥಳಗಳನ್ನು ಗುರುತಿಸಲಾಗಿದೆ. ಕೆಲವು ನಗರಗಳಲ್ಲಿ ಸ್ಥಳದ ಕೊರತೆ ಇದೆ. ಅಲ್ಲಿ ಪರ್ಯಾಯ ವ್ಯವಸ್ಥೆ ಮಾಡುತ್ತೇವೆ’ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT