ನವದೆಹಲಿ: ಭಾರತೀಯ ವಿಮಾನನಿಲ್ದಾಣ ಪ್ರಾಧಿಕಾರದ (ಎಎಐ) ₹232 ಕೋಟಿಯನ್ನು ತನ್ನ ವೈಯಕ್ತಿಕ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದ ಆರೋಪದ ಮೇಲೆ ಪ್ರಾಧಿಕಾರದ ಹಣಕಾಸು ವಿಭಾಗದ ಹಿರಿಯ ವ್ಯವಸ್ಥಾಪಕರೊಬ್ಬರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ರಾಹುಲ್ ವಿಜಯ್ ಬಂಧಿತ ಅಧಿಕಾರಿ. ಡೆಹ್ರಾಡೂನ್ ವಿಮಾನ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಘ, 2019–20ರಿಂದ 2022–23ರ ನಡುವೆ ಅವರು ಪ್ರಾಧಿಕಾರದ ಎಲೆಕ್ಟ್ರಾನಿಕ್ ದಾಖಲೆಗಳನ್ನು ತಿರುಚಿ, ಹಣವನ್ನು ತನ್ನ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದರು. ಈ ಹಣವನ್ನು ಟ್ರೇಡಿಂಗ್ಗೆ ಬಳಸಿಕೊಂಡಿದ್ದರು ಎಂಬುದು ತನಿಖೆಯಿಂದ ಪತ್ತೆಯಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಧಿಕಾರದ ಹಿರಿಯ ವ್ಯವಸ್ಥಾಪಕ ಚಂದ್ರಕಾಂತ ಪಿ. ಈ ಸಂಬಂಧ ಆಗಸ್ಟ್ 18ರಂದು ದೂರು ದಾಖಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.