ನವದೆಹಲಿ: ದೆಹಲಿ ಬಿಜೆಪಿ ಸರ್ಕಾರವು ವಿಧವೆಯರು ಮತ್ತು ವಿಚ್ಛೇದಿತ ಮಹಿಳೆಯರಿಗೆ ಪಿಂಚಣಿ ಸ್ಥಗಿತಗೊಳಿಸಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.

ಈ ಕುರಿತು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿರುವ ಎಎಪಿ ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್, ‘ವಿಧವೆಯರು ಮತ್ತು ವಿಚ್ಛೇದಿತ ಮಹಿಳೆಯರಿಗೆ ಕಳೆದ ಎರಡು ತಿಂಗಳಿನಿಂದ ಪಿಂಚಣಿ ಸಿಕ್ಕಿಲ್ಲ. ಸಾವಿರಾರು ಮಹಿಳೆಯರ ಪಿಂಚಣಿಯನ್ನು ಕಡಿತಗೊಳಿಸಲು ಬಿಜೆಪಿ ಸರ್ಕಾರ ಸಂಚು ರೂಪಿಸುತ್ತಿದೆ. ಕಳೆದ ಎರಡು ತಿಂಗಳಿನಿಂದ ಪಾವತಿಗಳು ಸ್ಥಗಿತಗೊಂಡಿವೆ’ ಎಂದು ಹೇಳಿದ್ದಾರೆ.

ಬಿಜೆಪಿಯ ಈ ಕ್ರಮ, ಹಿಂದಿನ ಎಎಪಿ ಸರ್ಕಾರ ಜಾರಿಗೆ ತಂದಿದ್ದ ಸಾಮಾಜಿಕ ಕಲ್ಯಾಣ ಯೋಜನೆಗಳನ್ನು ನಾಶಗೊಳಿಸುವ ಉದ್ದೇಶಪೂರ್ವಕ ಪ್ರಯತ್ನವಾಗಿದೆ. ಇಡೀ ದೇಶವೇ ಬಿಜೆಪಿ ನಾಯಕರ ಅನಗತ್ಯ ಭಾಷಣಗಳನ್ನು ಕೇಳಿ ಬೇಸತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಎಎಪಿ ಆರೋಪಗಳ ಕುರಿತು ಬಿಜೆಪಿಯಿಂದ ಯಾವುದು ಪ್ರತಿಕ್ರಿಯೆ ಬಂದಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.