ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದೆಹಲಿ ಸಿಎಂ ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿ ಪ್ರತಿಭಟನೆ

Published 7 ಏಪ್ರಿಲ್ 2024, 5:05 IST
Last Updated 7 ಏಪ್ರಿಲ್ 2024, 5:05 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಂಧನವನ್ನು ಖಂಡಿಸಿ ಆಮ್ ಆದ್ಮಿ ಪಕ್ಷವು (ಎಎಪಿ) ಇಂದು ಜಂತರ್ ಮಂತರ್‌ನಲ್ಲಿ 'ಉಪವಾಸ ದಿವಸ' ಪ್ರತಿಭಟನೆ ಹಮ್ಮಿಕೊಂಡಿದೆ.

ಕೇಜ್ರಿವಾಲ್ ಅವರ ಹೋರಾಟಕ್ಕೆ ಗರಿಷ್ಠ ಬೆಂಬಲಕ್ಕಾಗಿ ದೇಶವ್ಯಾಪಿ ಉಪವಾಸ ಆಚರಿಸಲಾಗುವುದು ಎಂದು ಪಕ್ಷದ ನಾಯಕ ಗೋಪಾಲ್ ರಾಯ್ ತಿಳಿಸಿದ್ದಾರೆ.

ದೇಶದ ಪ್ರಜಾಪ್ರಭುತ್ವದ ರಕ್ಷಣೆ, ಅನ್ಯಾಯ ಮತ್ತು ಸರ್ವಾಧಿಕಾರದ ವಿರುದ್ಧ ಹೋರಾಡಲು ಬಯಸವವರು ಇಂದು ತಮ್ಮ ತಮ್ಮ ಮನೆಗಳಲ್ಲಿ, ಗ್ರಾಮಗಳಲ್ಲಿ, ಜಿಲ್ಲಾ ಕೇಂದ್ರ, ರಾಜ್ಯ ರಾಜಧಾನಿಗಳಲ್ಲಿ ಸಾಮೂಹಿಕ ಉಪವಾಸ ನಡೆಸುವಂತೆ ಮನವಿ ಮಾಡಿದ್ದಾರೆ.

ಜಂತರ್ ಮಂತರ್‌ನಲ್ಲಿ ನಡೆಯಲಿರುವ ಸಾಮೂಹಿಕ ಉಪವಾಸದಲ್ಲಿ ದೆಹಲಿಯ ಸಚಿವರು, ಶಾಸಕರು, ಸಂಸದರು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ.

ದೆಹಲಿ ಸರ್ಕಾರದ ಅಬಕಾರಿ ನೀತಿ ಹಗರಣದಲ್ಲಿನ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಏಪ್ರಿಲ್ 15ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT