ನವದೆಹಲಿ: ಎಎಪಿ ಮತ್ತು ಕಾಂಗ್ರೆಸ್ ಜತೆಗಿನ ಮೈತ್ರಿಯು ಲೋಕಸಭೆ ಚುನಾವಣೆಗೆ ಮಾತ್ರ ಸೀಮಿತ ಎಂದು ಎಎಪಿಯ ದೆಹಲಿ ರಾಜ್ಯ ಸಂಚಾಲಕ ಗೋಪಾಲ್ ರಾಯ್ ತಿಳಿಸಿದರು.

ಈ ಮೂಲಕ ಅವರು, ಮುಂದಿನ ವರ್ಷ ದೆಹಲಿ ವಿಧಾನಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಎಎಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂಬ ಸುಳಿವು ನೀಡಿದರು.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಮನೆಯಲ್ಲಿ ಪಕ್ಷದ ಶಾಸಕರು ಮತ್ತು ಹಿರಿಯ ನಾಯಕರ ಸಭೆ ಗುರುವಾರ ನಡೆಯಿತು. ಲೋಕಸಭಾ ಚುನಾವಣೆಯಲ್ಲಿ ಪಕ್ಷವು ‘ಇಂಡಿಯಾ’ ಮೈತ್ರಿಕೂಟಕ್ಕೆ ಪೂರ್ಣ ಬೆಂಬಲ ನೀಡಿದೆ ಎಂದು ಗೋಪಾಲ್ ಅವರು ಪಿಟಿಐಗೆ ಪ್ರತಿಕ್ರಿಯಿಸಿದರು.

‘ಇಂಡಿಯಾ ಮೈತ್ರಿಯು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮಾತ್ರ. ಹಲವು ಪಕ್ಷಗಳು ಒಟ್ಟಾಗಿ ಚುನಾವಣೆ ಎದುರಿಸಿದವು. ಎಎಪಿ ಸಹ ಅದರ ಭಾಗವಾಗಿತ್ತು. ಆದರೆ, ಸದ್ಯಕ್ಕೆ ದೆಹಲಿ ವಿಧಾಸನಭಾ ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಮೈತ್ರಿ ಇಲ್ಲ’ ಎಂದು ಅವರು ಉತ್ತರಿಸಿದರು.

ಲೋಕಸಭೆ ಚುನಾವಣೆಯಲ್ಲಿ ದೆಹಲಿ ಕ್ಷೇತ್ರಗಳಲ್ಲಿ ಎಎಪಿ– ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳಿಗೆ ಸೋಲಾಯಿತು. ಬಿಜೆಪಿ ಸತತ ಮೂರನೇ ಬಾರಿಗೆ ದೆಹಲಿಯ ಎಲ್ಲ ಏಳು ಕ್ಷೇತ್ರಗಳನ್ನು ಜಯಿಸುವ ಮೂಲಕ ‘ಹ್ಯಾಟ್ರಿಕ್ ಕ್ಲೀನ್ ಸ್ವೀಪ್’ ಸಾಧನೆ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.